ಲೋಪದೋಷ ಸರಿಪಡಿಸಲು ಅದಾಲತ್ ಸಹಕಾರಿ

Yaragera Teachers Adalath
ಯರಗೇರಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಿಕ್ಷಕರ ಅದಾಲತ್ ಕಾರ್ಯಕ್ರಮವನ್ನು ಪ್ರೌಢಶಾಲೆ ಮುಖ್ಯಶಿಕ್ಷಕಿ ಶಿವಮ್ಮ ಉದ್ಘಾಟಿಸಿದರು.
Published on

ರಾಯಚೂರು: ಶಿಕ್ಷಕರು ಎದುರಿಸುತ್ತಿರುವ ಕುಂದು-ಕೊರತೆ ನಿವಾರಣೆ ಮತ್ತು ಸೇವಾ ಪುಸ್ತಕಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಶಿಕ್ಷಕರ ಅದಾಲತ್ ಒಳ್ಳೆಯ ಅವಕಾಶ ನೀಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ತಿಳಿಸಿದರು.

ಯರಗೇರಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ಅದಾಲತ್‌ನಲ್ಲಿ ಮಾತನಾಡಿದರು. ಶಿಕ್ಷಕರು ಅದಾಲತ್‌ನಲ್ಲಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದು ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ರೆಡ್ಡಿ ಮಾತನಾಡಿ, ಶಿಕ್ಷಕರ ಅದಾಲತ್ ಆಯೋಜನೆ ಶ್ಲಾಘನೀಯ ಎಂದರು. ಮುಖ್ಯಶಿಕ್ಷಕಿ ಶಿವಮ್ಮ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಲ್ಲೇಶ ನಾಯಕ, ಸಿಆರ್‌ಪಿ ಹೀರಾಲಾಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net