

ರಾಯಚೂರು: ಸಾರಿಗೆ ನೌಕರರ ನಡೆಸುತ್ತಿರುವ ಮುಷ್ಕರ ಭಾನುವಾರವೂ ಮುಂದುವರಿದಿದ್ದು, ಬೆರಳೆಣಿಯಷ್ಟು ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಳಿದಿದ್ದು, ಆಂಧ್ರ ಮತ್ತು ತೆಲಂಗಾಣದ ಬಸ್ ಓಡಾಟ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂತು.
ದೂರದ ಮಾರ್ಗದಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ಓಡಾಟ ಕಂಡು ಬಂದಿದ್ದು, ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಖಾಸಗಿ ವಾಹನಗಳಿಗೆ ಮೊರೆ ಹೋಗುವಂತಾಯಿತು. ರಾಯಚೂರು ಕೇಂದ್ರ ಬಸ್ ನಿಲ್ದಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅನ್ಯ ರಾಜ್ಯದ ಬಸ್‌ಗಳು ಸಂಚರಿಸಿದವು. ಖಾಸಗಿ ವಾಹನಗಳು ಕೂಡ ಜಿಲ್ಲೆಯ ಪ್ರಮುಖ ಪಟ್ಟಣಗಳಿಗೆ ಸಂಚರಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶದ ಜನರು ತಮ್ಮ ಗ್ರಾಮಗಳಿಗೆ ತೆರಳು ಸಂಕಷ್ಟ ಎದುರಿಸುವಂತಾಯಿತು. ಖಾಸಗಿ ವಾಹನ ಮಾಲೀಕರು ನಿಗದಿಗಿಂತ ಹೆಚ್ಚಿನ ಜನರನ್ನು ವಾಹನದಲ್ಲಿ ಹತ್ತಿಕೊಂಡು ಹೋಗುತ್ತಿರುವುದು ಕಂಡು ಬಂತು.