ದ್ವಿಚಕ್ರ ವಾಹನ ಸವಾರರಿಗೆ ನ.1ರಿಂದ ಹೆಲ್ಮೆಟ್ ಕಡ್ಡಾಯ

raichur helmet mandatory
Published on

ರಾಯಚೂರು: ಜಿಲ್ಲೆಯಲ್ಲಿ ಹೆಲ್ಮೆಟ್ ರಹಿತ ವಾಹನ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಸಾವನಪ್ಪುತ್ತಿರುವ ಹಿನ್ನೆಲೆ ಈಗಾಗಲೇ ಜಾರಿಯಲ್ಲಿರುವ ಕಡ್ಡಾಯ ಹೆಲ್ಮೆಟ್ ಬಳಕೆಯ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.

ರಸ್ತೆ ಅಪಘಾತಗಳ ಕುರಿತು ವಿಜಯವಾಣಿಯಲ್ಲಿ ಅ.17ರಂದು ‘ರಸ್ತೆ ಅಪಘಾತಗಳಿಗಿಲ್ಲ ಕಡಿವಾಣ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಸವಾರರೇ ಸಾವನಪ್ಪುತ್ತಿರುವ ಬಗ್ಗೆ ವರದಿಯಲ್ಲಿ ತಿಳಿಸಲಾಗಿತ್ತು. ವರದಿ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಇದೀಗ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಮೊದಲಿನಿಂದಲೂ ಚಾಲ್ತಿಯಲ್ಲಿದ್ದ ಕಡ್ಡಾಯ ಹೆಲ್ಮೆಟ್ ನಿಯಮ ನ.1ರಿಂದ ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ತಿಳಿಸುತ್ತಿದ್ದು, ನಿಯಮ ಪಾಲನೆಗೆ ಹತ್ತು ದಿನಗಳ ಗಡುವು ನೀಡಿದೆ.
ನ.1ರಿಂದ ಹೆಲ್ಮೆಟ್ ಧರಿಸದೇ ದ್ವಿಚಕ್ರವಾಹನ ಚಲಾಯಿಸಿದ್ದಲ್ಲಿ ದಂಡ ಬೀಳುವ ಸಾಧ್ಯತೆಯಿದೆ. ಹಿಂಬದಿ ಸವಾರರು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎನ್ನುವುದು ಪೊಲೀಸರ ಸೂಚನೆಯಾಗಿದೆ. ಹೆಲ್ಮೆಟ್‌ರಹಿತವಾಗಿ ಜಿಲ್ಲೆಯಲ್ಲಿ 2024ರಲ್ಲಿ 135 ಜನ ಪ್ರಾಣ ಕಳೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net