

ರಾಯಚೂರು: ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಹಣ್ಣಿನ ಅಂಗಡಿಗೆ ನುಗ್ಗಿದ ಘಟನೆ ನಗರದ ಹೊರವಲಯದ ಯರಮರಸ್ ಬೈಪಾಸ್ ಬಳಿ ಭಾನುವಾರ ಬೆಳಗಿನಜಾವ ಸಂಭವಿಸಿದೆ.
ರಾಯಚೂರಿನಿಂದ ಹೈದ್ರಾಬಾದ್ ಕಡೆ ಹೊರಟಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದು, ಲಾರಿಯು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಣ್ಣಿನ ಅಂಗಡಿಗೆ ಡಿಕ್ಕಿ ಹೊಡೆದಿದೆ. ಅಂಗಡಿಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಜರುಗಿಲ್ಲ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿಲ್ಲ.