ಎಂದೂ ಕ್ಷೀಣಿಸದು ಪುಸ್ತಕದ ಪ್ರಾಮುಖ್ಯತೆ - ಜಿಪಂ ಸಿಇಒ ನೂರ್ ಜಹರಾ ಖಾನಂ ಹೇಳಿಕೆ

230422 Raichur Personnel Service Award Programmee
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮವನ್ನು ಜಿಪಂ ಸಿಇಒ ನೂರ್ ಜಹರಾ ಖಾನಂ ಉದ್ಘಾಟಿಸಿದರು.
Published on

ರಾಯಚೂರು: ಒಂದು ವಸ್ತು ಹಳೆಯದಾಗುತ್ತಿದ್ದಂತೆ ಅದರ ಪ್ರಾಮುಖ್ಯತೆ ಕಡಿಮೆಯಾಗುತ್ತ ಸಾಗುತ್ತದೆ. ಆದರೆ ಪುಸ್ತಕದ ಪ್ರಾಮುಖ್ಯತೆ ಎಂದಿಗೂ ಕಡಿಮೆಯಾಗುವುದಿಲ್ಲ. ಪುಸ್ತಕದಿಂದ ಪಡೆದ ಜ್ಞಾನವೂ ನಶಿಸುವುದಿಲ್ಲ ಎಂದು ಜಿಪಂ ಸಿಇಒ ನೂರ್ ಜಹರಾ ಖಾನಂ ಹೇಳಿದರು.

ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಗ್ರಂಥಾಲಯ ಇಲಾಖೆಯಿಂದ ಶನಿವಾರ ಏರ್ಪಡಿಸಿದ್ದ ವಿಶ್ವ ಪುಸ್ತಕ ದಿನಾಚರಣೆ ಹಾಗೂ ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜ್ಞಾನಾರ್ಜನೆಗಾಗಿ ಪುಸ್ತಕ ಓದುವ ಹವ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಪುಸ್ತಕ ಓದಿನಿಂದ ಆಡಳಿತ ಸುಧಾರಣೆ ಮಾಡಲು ಸಾಧ್ಯ. ರಜಾ ದಿನಗಳಲ್ಲಿಯೂ ಗ್ರಂಥಾಲಯಗಳನ್ನು ತೆರೆಯಲು ಪ್ರಯತ್ನಿಸಲಾಗುವುದು. ಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಪಡೆದು ಜ್ಞಾನಾರ್ಜನೆಗೆ ಮುಂದಾಗಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಪುಸ್ತಕ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಥಾಕ್ಕೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕರ್ನಾಟಕ ಸಂಘದಲ್ಲಿ ಚಾಲನೆ ನೀಡಿದರು. ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಸಾಹಿತಿ ವೀರ ಹನುಮಾನ, ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರೆಬಿನಾಳ, ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಭೀಮನಗೌಡ ಇಟಗಿ, ಸೈಯದ್ ಹಫೀಜುಲ್ಲಾ, ಟಿ.ಮಲ್ಲೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net