

ರಾಯಚೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರನ್ನು ನಾಮಕರಣ ಮಾಡಿ ಸಿಎಂ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಈ ಘೋಷಣೆಯನ್ನು ಮಾಡಿದ್ದು, ರಾಯಚೂರು ಗ್ರಾಮೀಣ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಸಲಹೆಯ ಮೇರೆಗೆ ರಾಯಚೂರು ವಿವಿಯನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವೆಂದು ಘೋಷಿಸಲಾಗಿದೆ. ಮಹರ್ಷಿ ವಾಲ್ಮೀಕಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಸಿಎಂ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.