ಡಿ.6ರಂದು 'ಬಹುಜನರಿಗೆ ಭೀಮನ ಕೊಡುಗೆ' ವಿಚಾರ ಸಂಕಿರಣ

IMG-20241206-WA0020
Published on

ರಾಯಚೂರು: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರವರ ಮಹಾಪರಿ ನಿರ್ವಾಣ ದಿನಾಚರಣೆ ಅಂಗವಾಗಿ ಭೀಮ್ ಆರ್ಮಿ ಸಂಘಟನೆಯಿಂದ ‘ಭಾರತದ ಬಹುಜನರಿಗೆ ಭೀಮನ ಕೊಡುಗೆ’ ಎಂಬ ವಿಷಯದ ಕುರಿತು ಡಿ.6ರಂದು ಬೆಳಿಗ್ಗೆ 10.30ಕ್ಕೆ ವಿಚಾರ ಸಂಕೀರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಮೀಣ ಕುಮಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಜಗತ್ತಿಗೆ ಮಾದರಿಯಾದ ಭಾರತ ಸಂವಿಧಾನದ ಪಿತಾಮಹ ಅಂಬೇಡ್ಕರ್ ಕೇವಲ ಒಂದು ಸಮುದಾಯ, ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ವಿಶೇಷವಾಗಿದ್ದಾರೆ. ಅವರ ಕೊಡುಗೆಗಳ ಕುರಿತು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ಪ್ರಗತಿಪರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಬದಲ್ಲಿ ದೀಪಕ್, ರಮೇಶ, ಪ್ರವೀಣ, ನಾಗರಾಜ, ನವೀನಕುಮಾರ, ರವಿಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net