ವಿಶ್ವೇಶ್ವರ ಹೆಗಡೆ ಸಭಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿ

180223 Raichur Lingayatha Appeal
ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಸಭಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
Published on

ರಾಯಚೂರು: ವಿಧಾನಸಭೆ ಅಧಿವೇಶನದಲ್ಲಿ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಬಗ್ಗೆ ಲಘುವಾಗಿ ಮಾತನಾಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸಭಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಒತ್ತಾಯಿಸಿದೆ.

ಮಹಾಸಭಾ ನಿಯೋಗ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಶುಕ್ರವಾರ ಮನವಿ ಸಲ್ಲಿಸಿ, ಕಾಗೇರಿ ಸಭಾಧ್ಯಕ್ಷರ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳದೆ ಒಂದು ಪಕ್ಷದ ವಕ್ತಾರರಂತೆ ವರ್ತಿಸುವ ಮೂಲಕ ಸಭಾಧ್ಯಕ್ಷ ಸ್ಥಾನದ ಘನತೆ, ಗೌರವಕ್ಕೆ ಧಕ್ಕೆ ತಂದಿದ್ದಾರೆ. ಈಶ್ವರ ಖಂಡ್ರೆ ವಿರುದ್ಧ ದುರುದ್ದೇಶದಿಂದ ಸಭಾಧ್ಯಕ್ಷರು ವರ್ತಿಸಿದ್ದು, ವಿಧಾನಸಭೆ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಜನನಾಯಕನಿಗೆ ಅಪಮಾನ ಮಾಡಿರುವುದು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net