ನೀರಿನ ಸಮಸ್ಯೆ ನಿವಾರಿಸಲಿದೆ ಅಮೃತ ಸರೋವರ

16092022 raichur meeting
Published on

ರಾಯಚೂರು: ನರೇಗಾ ಯೋಜನೆಯಡಿ ಕೈಗೊಂಡಿರುವ ಅಮೃತ ಸರೋವರ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಇಂಜಿನಿಯರ್ ಸಿ.ಕೆ ಮಲ್ಲಪ್ಪ ಸೂಚಿಸಿದರು.

ಸ್ಥಳೀಯ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನರೇಗಾ ಹಾಗೂ ಅಮೃತ ಸರೋವರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ನರೇಗಾದ 262 ಕಾಮಗಾರಿಗಳ ಪೈಕಿ ಅಮೃತ ಸರೋವರ ಯೋಜನೆ ಪ್ರಮುಖವಾಗಿದೆ. ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ನೀಗಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಅಮೃತ ಸರೋವರ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಿ ನೀರು ಶೇಖರಣೆಯಾಗುವಂತೆ ಮಾಡಲಾಗುವುದು. ಪಿಡಿಒಗಳು ಕಾಮಗಾರಿ ಕುರಿತು ಸಂಪೂರ್ಣ ಮಾಹಿತಿ ಹೊಂದಿರಬೇಕು. ನರೇಗಾ ಯೋಜನೆ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ ಗಲಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net