ಚಿಕಿತ್ಸೆ ಮೂಲಕ ರೇಬಿಸ್ ರೋಗ ತಡೆಗಟ್ಟಬಹುದು: ಡಿಎಚ್‌ಒ ಸುರೇಂದ್ರಬಾಬು ಸಲಹೆ

Rabis day
Published on

ರಾಯಚೂರು: ಪ್ರಾಣಿಗಳು ಕಚ್ಚಿದಾಗ ನಿರ್ಲಕ್ಷೃ ವಹಿಸದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.

ನಗರದ ಆರೋಗ್ಯ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್, ಪಶು ಸಂಗೋಪನೆ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ನಾಯಿ, ಬೆಕ್ಕು ಇತರೆ ಪ್ರಾಣಿಗಳು ಕಚ್ಚಿದ ಕೂಡಲೇ ಮೊದಲು ಗಾಯದ ಮೇಲೆ ಸಾಬೂನಿನಿಂದ ಹತ್ತು ನಿಮಿಷದವರೆಗೆ ತೊಳೆಯಬೇಕು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ರೇಬಿಸ್ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ.ಗಣೇಶ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ವೈ.ವೆಂಕಟೇಶ, ರಿಮ್ಸ್ ಪಿಎಸ್‌ಎನ್ ವಿಭಾಗದ ಮುಖ್ಯಸ್ಥ ರಾಹುಲ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಯಶೋಧಾ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣಾಧಿಕಾರಿ ಡಾ.ಶಾಕೀರ್ ಮೊಯಿನುದ್ದಿನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net