ನ.10ರವರೆಗೆ ಮಾದಕ ವಿರೋಧಿ ಅಭಿಯಾನ

drugs
Published on

ರಾಯಚೂರು: ಇತ್ತೀಚಿನ ದಿನಮಾನಗಳಲ್ಲಿ ಯುವ ಪೀಳಿಗೆ ಮಾದಕ ವಸ್ತುಗಳ ಗುಲಾಮರಾಗುತ್ತಿದ್ದಾರೆ. ಅದರಲ್ಲೂ ವಿದ್ಯಾರ್ಥಿಗಳು ಈ ಚಟಗಳಿಗೆ ಹೆಚ್ಚಾಗಿ ಮಾರು ಹೋಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸಂಘಟನೆ ವತಿಯಿಂದ ಸೇ ನೋ ಟು ಡ್ರಗ್ಸ್ ಮಾದಕ ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಸಂಚಾಲಕ ಮಹ್ಮದ್ ಅಲಿ ಮುರ್ತುಜಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾದಕ ವ್ಯಸನವನ್ನು ತಡೆಗಟ್ಟಲು ನ.10ರವರೆಗೆ ಸೇ ನೋ ಟು ಡ್ರಗ್ಸ್ ಮಾದಕ ವಿರೋಧಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಮಾದಕ ವಸ್ತುಗಳನ್ನು ಬಳಸದಂತೆ ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ ಕಾರ್ಯಕ್ರಮ, ಶಿಕ್ಷಕರ ಕಾರ್ಯಾಗಾರ, ಬಿತ್ತಿಪತ್ರ ವಿತರಣೆ ಸೇರಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಸಂಘದ ನಗರಾಧ್ಯಕ್ಷ ಸಾದ್ ಮುನಿಯಾರ್, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಸಮಾದ್ ಚೌದ್ರಿ, ಕಾರ್ಯದರ್ಶಿ ಹಮೀದ್ ಮುಲ್ಲ, ಜಮಾತೆ ಇಸ್ಲಾಂ ಅಧ್ಯಕ್ಷ ಮಹ್ಮದ್ ಅಸೀಮುದ್ದಿನ್ ಅಕ್ತರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net