ರಾಯಚೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಂದ 2025-26ನೇ ಸಾಲಿನಲ್ಲಿ ಶೇ.100ರಷ್ಟು ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಿರುವುದು ಸಂತಸ ತಂದಿದೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಪಂ ಸಿಇಓ ಈಶ್ವರ ಕುಮಾರ ಕಾಂದೊಗೆ ಪ್ರಶಂಸಾ ಪತ್ರ ಬರೆದಿದ್ದಾರೆ.
ಈ ಸಾಧನೆಗೆ ಶ್ರಮಿಸಿದ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪರಿಶ್ರಮ ಮತ್ತು ಕಾರ್ಯನಿಷ್ಠೆಯನ್ನು ಪ್ರಶಂಸಿಸುತ್ತೇನೆ. ಈ ಸಾಧನೆ ವ್ಯವಸ್ಥಿತವಾದ ಯೋಜನೆ, ಪರಿಣಾಮಕಾರಿ ಸಮನ್ವಯ ಹಾಗೂ ನಿರಂತರ ಪರಿಶ್ರಮದ ಫಲವಾಗಿದ್ದು, ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.
ಈ ಮಹತ್ವದ ಸಾಧನೆಗೆ ನೇತೃತ್ವ ನೀಡಿದ ನಿಮಗೆ ಮತ್ತು ತಾಲ್ಲೂಕು, ಗ್ರಾಮ ಪಂಚಾಯಿತಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಲು ಹರ್ಷಿಸುತ್ತೇನೆಂದು ಪ್ರಶಂಸಾ ಪತ್ರದಲ್ಲಿ ತಿಳಿಸಿದ್ದಾರೆ.