ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.2ರಿಂದ 7ರವರೆಗೆ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ, ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 80 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳನ್ನೊಳಗೊಂಡು 24 ತಂಡಗಳಾ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಜಿಲ್ಲೆಯ 7 ತಾಲೂಕಿನ ಪ್ರತಿಯೊಂದು ಕಛೇಗೆ ಅಧಿಕಾರಿಗಳು ಭೇಟಿ ನೀಡಿ, ಅನೇಕ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ದಾಖಲಾತಿಯಲ್ಲಿ ಅನೇಕ ಲೋಪಗಳು ಕಂಡು ಬಂದಿವೆ. ಲೋಪದೋಷವಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ ಒಟ್ಟು 20 ಸುಮೋಟೋ ಪ್ರಕರಣನ್ನು ದಾಖಲು ಮಾಡಲಾಗಿದೆ. ಅಪರಾಧ ಸಾಭೀತಾದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.