ಆಂಜನೇಯ ದೇವಸ್ಥಾನದ 23ನೇ ವಾರ್ಷಿಕೋತ್ಸವ

ಮಾನ್ವಿ ಎಪಿಎಂಸಿ ಆವರಣದಲ್ಲಿರುವ ಉದ್ಭವ ಆಂಜನೇಯ ಸ್ವಾಮಿ ದೇವಸ್ಥಾನದ 23ನೇ ವಾರ್ಷಿಕೋತ್ಸವ ಅಂಗವಾಗಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಶೇಷ ಪೂಜೆ ಸಲ್ಲಿಸಿದರು.
ಮಾನ್ವಿ ಎಪಿಎಂಸಿ ಆವರಣದಲ್ಲಿರುವ ಉದ್ಭವ ಆಂಜನೇಯ ಸ್ವಾಮಿ ದೇವಸ್ಥಾನದ 23ನೇ ವಾರ್ಷಿಕೋತ್ಸವ ಅಂಗವಾಗಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಶೇಷ ಪೂಜೆ ಸಲ್ಲಿಸಿದರು.
Published on

ಮಾನ್ವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಉದ್ಭವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ 23 ನೇ ವಾರ್ಷಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಸುಪ್ರಭಾತ ಸೇವೆ, ಪವಮಾನ ಹೋಮ, ಪೂರ್ಣಾಹುತಿ, ಪಂಚಾಮೃತ ಅಭಿಷೇಕ, ತುಳಸಿ ಪುಷ್ಪಾರ್ಚಾನೆ ನಡೆದವು. ಆಂಜನೇಯ ಸ್ವಾಮಿ ಮೂರ್ತಿಯನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಸುಮಂಗಲಿಯರು ಕುಂಭ, ಕಳಸದೊಂದಿಗೆ ಪಾಲ್ಗೊಂಡಿದ್ದರು. ನಂತರ ಭಕ್ತರಿಗೆ ಅನ್ನದಾನ ಸೇವೆ ನಡೆಸಲಾಯಿತು. ಸಂಜೆ ರಥೋತ್ಸವ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net