ಬೀದರ್‌ನಲ್ಲಿ ಏ.11,12ರಂದು ಪತ್ರಕರ್ತರ 40ನೇ ರಾಜ್ಯಮಟ್ಟದ ಸಮ್ಮೇಳನ

R.GURUNATH
R.GURUNATH
Published on
ರಾಯಚೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏ.11 ಮತ್ತು 12ರಂದು ಬೀದರ್‌ನಲ್ಲಿ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆಂದು ಎಂದು ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್‌ನ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನ ಉದ್ಘಾಟಿಸುವರು. ವಸ್ತು ಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡುವರು. ಬಸವಕಲ್ಯಾಣದ ಹಾರಕೂಡ ಹಿರೇಮಠದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು, ಬಸವ ಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸುವರು. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಪ್ರಧಾನ ಭಾಷಣ ಮಾಡುವರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು.
ಏ.12ರ ಬೆಳಗ್ಗೆ 9.45ಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಪ್ರತಿನಿಧಿಗಳ ಸಮಾವೇಶ ಮತ್ತು ಸರ್ವ ಸದಸ್ಯರ ಸಭೆ ಜರುಗಲಿದೆ. ಬೆಳಗ್ಗೆ 11.30ಕ್ಕೆ ಮಾಹಿತಿ ಹಕ್ಕು ಮತ್ತು ಪತ್ರಕರ್ತರು ಕುರಿತು ಮೂರನೇ ವಿಚಾರಗೋಷ್ಠಿ ಜರುಗಲಿದೆ. ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಉದ್ಘಾಟಿಸುವರು. ಮತ್ತೋರ್ವ ಆಯುಕ್ತರಾದ ಬದ್ರುದ್ದೀನ್ ವಿಷಯ ಪ್ರಸ್ತಾವನೆ ಮಾಡುವರು.
ಆಯೋಗದ ಕಲಬುರಗಿ ವಿಭಾಗದ ಆಯುಕ್ತರಾದ ಬಿ.ವೆಂಕಟಸಿಂಗ್ ಅಧ್ಯಕ್ಷತೆ ವಹಿಸುವರು.ಸಮ್ಮೇಳನಕ್ಕೆ ಜಿಲ್ಲೆಯಿಂದ ಸುಮಾರು 200ಕ್ಕೂ ಅಧಿಕ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ವಿವಿಧ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಅನೇಕರು ಪಾಲ್ಗೊಳ್ಳುವರು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ ಕುಕನೂರು, ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ನಾಗಡದಿನ್ನಿ, ಅರವಿಂದ ಕುಲಕರ್ಣಿ, ಉಪಾಧ್ಯಕ್ಷ ಮಹಾನಂದ ನಾಯಕ, ಖಜಾಂಚಿ ಮಲ್ಲಿಕಾರ್ಜುನಯ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net