ಆರೋಗ್ಯವಂತ ಮಗು ದೇಶದ ಸಂಪತ್ತು

ದೇವದುರ್ಗದಲ್ಲಿ ಆಯೋಜಿಸಿದ್ದ ಬಾಲಕವಿಕಾಸ ನಡಿಗೆ ಪಾಲಕರ ಕಡೆಗೆ ತರಬೇತಿ ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ಉದ್ಘಾಟಿಸಿದರು. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶರಣಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಭರತ್‌ಕುಮಾರ್, ಚಂದನಕರ್ ಧಾರವಾಡ, ಶಾಂತಾ, ಜಿಲ್ಲಾ ಮಕ್ಕಳ ಸಮಿತಿ ಯೋಜನೆ ಸಂಯೋಜಕ ಮೋಹನ್‌ಕುಮಾರ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ಅಭಿಮತ
  • ದೇವದುರ್ಗ ಬಾಲವಿಕಾಸ ನಡಿಗೆ ಪಾಲಕರ ಕಡೆಗೆ
ದೇವದುರ್ಗ: ಬಡತನ, ಅನಕ್ಷರತೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ಕಡಿಮೆ ತೂಕ ರೋಗ ಬಾಧಿಸುತ್ತಿರುವುದು ನೋವಿನ ಸಂಗತಿ. ಮಗುವಿನ ಆರೋಗ್ಯ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಿಂದ ಆಯೋಜಿಸಿದ್ದ ಬಾಲವಿಕಾಸ ನಡಿಗೆ ಪಾಲಕರ ಕಡೆಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಭಾಗದಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ಕಡಿಮೆ ತೂಕ ರೋಗ ಬಾಧಿಸುತ್ತಿದೆ.
ಹೀಗಾಗಿ ಪಾಲಕರು ಮಕ್ಕಳ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯವಂತ ಮಗು ದೇಶದ ಸಂಪತ್ತು ಇದ್ದಂತೆ. ಆದ್ದರಿಂದ ಪಾಲಕರಿಗೆ ಅಗತ್ಯ ತರಬೇತಿ ಹಾಗೂ ಆರೋಗ್ಯ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಪಾಲಕರು ಸದ್ಬಳಕೆ ಮಾಡಿಕೊಂಡು ಮಕ್ಕಳನ್ನು ಉತ್ತಮ ಆರೋಗ್ಯವಂತ ಪ್ರಜೆಯಾಗಿ ಬೆಳೆಸಬೇಕು ಎಂದರು.
ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶರಣಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಭರತ್‌ಕುಮಾರ್, ಚಂದನಕರ್ ಧಾರವಾಡ, ಶಾಂತಾ, ಜಿಲ್ಲಾ ಮಕ್ಕಳ ಸಮಿತಿ ಯೋಜನೆ ಸಂಯೋಜಕ ಮೋಹನ್‌ಕುಮಾರ್, ನಾಗರಾಜ, ದೀಪಾ ರಾಯಚೂರು, ಶಶಿರೇಖಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net