ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದಿಂದ ಬುಧವಾರ ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೈಕ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್, ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರದಾರ್ , ಪ್ರಮುಖರಾದ ಜಿಲಾನಿ ಯರಗೇರಾ, ಭೀಮಯ್ಯ, ಮಹೇಂದ್ರ, ಪ್ರಹ್ಲಾದ, ಜಗದೀಶ್, ಹನೀಫ್ ಅಬಕಾರಿ, ಲಕ್ಷ್ಮಣ, ರಾಮಸ್ವಾಮಿ, ಮಾರಣ್ಣ, ನರಸಿಂಹಲು, ಸಣ್ಣ ನರಸಪ್ಪ, ಯಲ್ಲಪ್ಪ ಇದ್ದರು.
ರಾಯಚೂರು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದಿಂದ ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೈಕ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಕೇಂದ್ರ ಸರ್ಕಾರದಿಂದ ಮೇ 15ರಿಂದ 25ರ ಒಳಗೆ ಕೇವಲ 11 ದಿನಗಳಲ್ಲಿ ಪೆಟ್ರೋಲ್ 7.38 ರೂಪಾಯಿ ಹಾಗೂ ಡಿಸೇಲ್ 7.52 ರೂಪಾಯಿ ಹಾಗೂ ಸಿಎನ್‌ಜಿ 6 ರೂಪಾಯಿ ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 99 ಡಾಲರ್‌ಗಿಂತಲೂ ಕಡಿಮೆಯಿದ್ದರೂ ಪೆಟ್ರೋಲ್ ಶೇ 42.8ರಷ್ಟು ಮತ್ತು ಡೀಸೆಲ್ ಶೇ 67.9ರಷ್ಟು ಏರಿಕೆಯಾಗಿದೆ.
ಇಂಧನ ಬೆಲೆ ಏರಿಕೆಯು ಸಾರಿಗೆಯಿಂದ ಹಿಡಿದು ಆಹಾರ ಪದಾರ್ಥಗಳವರೆಗೆ ಪ್ರತಿಯೊಂದು ವಲಯದ ಮೇಲೂ ಪ್ರಭಾವ ಬೀರಿದ್ದು, ಮೋದಿ ಸರ್ಕಾರವು ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರ ಬೆನ್ನೆಲುಬನ್ನು ಮುರಿದಿದೆ ಎಂದು ದೂರಿದರು.
ಪಕ್ಷದ ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರದಾರ್ ಮಾತನಾಡಿ, ಇಂದನ, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ ಜನರು ಎಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಾರೆಂಬ ಆತಂಕದಿಂದ ಕುತಂತ್ರವನ್ನು ಹೆಣೆದಿದೆ. ಐದು ರಾಜ್ಯಗಳ ಚುನಾವಣೆಗೆ ಮುನ್ನ, ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಮಿಲಿಟರಿ ಸಂಘರ್ಷವು ದೇಶೀಯ ಇಂಧನ ಪೂರೈಕೆ ಅಥವಾ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸರ್ಕಾರ ನಾಗರಿಕರಿಗೆ ನೀಡಿದ ಭರವಸೆ ಹಸಿ ಸುಳ್ಳಾಗಿದೆ.
ಪೆಟ್ರೋಲ್ ಪಂಪ್‌ಗಳ ಮುಂದೆ. ಅಡುಗೆ ಅನಿಲ ವಿತರಣಾ ಅಂಗಡಿಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದು, ಕೇಂದ್ರ ಸರ್ಕಾರದ ಜನದ್ರೋಹಿ ನೀತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಜಿಲಾನಿ ಯರಗೇರಾ, ಭೀಮಯ್ಯ, ಮಹೇಂದ್ರ, ಪ್ರಹ್ಲಾದ, ಜಗದೀಶ್, ಹನೀಫ್ ಅಬಕಾರಿ, ಲಕ್ಷ್ಮಣ, ರಾಮಸ್ವಾಮಿ, ಮಾರಣ್ಣ, ನರಸಿಂಹಲು, ಸಣ್ಣ ನರಸಪ್ಪ, ಯಲ್ಲಪ್ಪ ಇದ್ದರು.