ಸರಳವಾಗಿ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಮಂಗಳವಾರ  ಶ್ರೀ  ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ ಸರಳವಾಗಿ ನಡೆಯಿತು. ಡಿಸಿ ಕಚೇರಿಯ ತಹಶೀಲ್ದಾರ್ ಪರಶುರಾಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ದ್ರಾಕ್ಷಿ, ಅನೀಲ್ ಕುಮಾರ್, ವಿನೋದ ಕುಮಾರ್, ಸುರೇಶ, ಶೈಲಜಾ ಇದ್ದರು.

Published on

ರಾಯಚೂರು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ ಸರಳವಾಗಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಪರಶುರಾಮ ಉದ್ಘಾಟಿಸಿ ಮಾತನಾಡಿ, ಮಹನೀಯರ ಜಯಂತಿಗಳು ಆಚರಣೆಗಷ್ಟೆ ಸೀಮಿತವಾಗದೇ ಅವರ ಆದರ್ಶ, ತತ್ತ್ವಗಳನ್ನು ನಾವು ಮೈಗೂಡಿಸಿಕೊಳ್ಳಬೇಕು. 17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು.

ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕಿದೆ. ಸಮಾಜದಲ್ಲಿನ ಅಂಕುಡೊಅಕುಗಳನ್ನು ತಿದ್ದಿ, ತಾರತಮ್ಯ, ಅಸಮಾನತೆ ಹೋಗಲಾಡಿಸಲು ತಾತಯ್ಯರು ಕೈಗೊಂಡ ಸಾಮಾಜಿಕ ಸುಧಾರಣೆ ಕಾರ್ಯ ಇಂದಿಗೂ ಮಾದರಿಯಾಗಿದೆ. ತ್ರಿಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರವು ಅವರ ಜಯಂತಿ ಆಚರಣೆ ಮಾಡುತ್ತಿದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ದ್ರಾಕ್ಷಿ, ಅನೀಲ್ ಕುಮಾರ್, ವಿನೋದ ಕುಮಾರ್, ಸುರೇಶ, ಶೈಲಜಾ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net