ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ನಾರಿ

ಮಾನ್ವಿಯ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನ ಆಚರಿಸಲಾಯಿತು. ಪ್ರಾಚಾರ್ಯ ಡಾ.ಜೆ.ಎಲ್. ಈರಣ್ಣ, ರಂಗಣ್ಣ, ಮರಿಯಮ್ಮ ಇದ್ದರು.
ಮಾನ್ವಿಯ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನ ಆಚರಿಸಲಾಯಿತು. ಪ್ರಾಚಾರ್ಯ ಡಾ.ಜೆ.ಎಲ್. ಈರಣ್ಣ, ರಂಗಣ್ಣ, ಮರಿಯಮ್ಮ ಇದ್ದರು.
Published on
ಮಾನ್ವಿ: ಜಾತಿ ಧರ್ಮ ಲಿಂಗ ತಾರತಮ್ಯ, ಬಾಲ್ಯ ವಿವಾಹ, ಸತಿ ಪದ್ಧತಿ, ವಿಧವೆಯರ ಕೇಶ ಮುಂಡನ ಸೇರಿ ಇತರ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಜೆ.ಎಲ್. ಈರಣ್ಣ ಹೇಳಿದರು. 
ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅಕ್ಷರದವ್ವನ ಪಾತ್ರ ಮಹತ್ವದ್ದಾಗಿದೆ. ಮಹಾರಾಷ್ಟ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಪತಿಯೊಂದಿಗೆ 1848ರಲ್ಲಿ ಬಾಲಕಿಯರ ಮೊದಲ ಶಾಲೆ, ವಿಧವೆಯರಿಗಾಗಿ ಆಶ್ರಮ ಸ್ಥಾಪಿಸಿದರು.
 ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಸ್ಪರ್ಧಿಸುವಂತೆ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳು ಸ್ಫೂರ್ತಿದಾಯಕವಾಗಿದೆ ಎಂದರು. ಕಾಲೇಜಿನ ಕಚೇರಿ ಅಧೀಕ್ಷಕ ರಂಗನಾಥ್ ಅತ್ತನೂರು, ಉಪನ್ಯಾಸಕ ಡಾ.ಬಸವರಾಜ ಕರಡಿಗುಡ್ಡ, ಕಚೇರಿ ಸಿಬ್ಬಂದಿ ಭೀಮಸಿಂಗ್, ಸುರೇಶ್ ಹರನಹಳ್ಳಿ, ರಂಗಣ್ಣ, ಮರಿಯಮ್ಮ ಮತ್ತು ರೇಣುಕಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net