ಗ್ರಾಮಗಳ ಮೂಲಸೌಕರ್ಯಕ್ಕೆ ಕ್ರಮ

ತಾಲೂಕಿನ ಚಾಗಬಾವಿ ಗ್ರಾಮದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಸೀಮಿತ ಪೂಜೆ ಮಾಡಿದ ಮಾಜಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ ಸೇರಿದಂತೆ ಅನೇಕರು ಇದ್ದರು.ಸಿರವಾರ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಜಿಚೌದ್ರಿ, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ, ಶ್ರೀನಿವಾಸ್, ರಮೇಶ್ ದರ್ಶನಕರ್, ಚಂದು ಸಾಹುಕಾರ್ ಕಳಸ,ಬಸವರಾಜ್, ಉದಯ ಸಾಹುಕಾರ್ ಇದ್ದರು.
ತಾಲೂಕಿನ ಚಾಗಬಾವಿ ಗ್ರಾಮದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಸೀಮಿತ ಪೂಜೆ ಮಾಡಿದ ಮಾಜಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ ಸೇರಿದಂತೆ ಅನೇಕರು ಇದ್ದರು.ಸಿರವಾರ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಜಿಚೌದ್ರಿ, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ, ಶ್ರೀನಿವಾಸ್, ರಮೇಶ್ ದರ್ಶನಕರ್, ಚಂದು ಸಾಹುಕಾರ್ ಕಳಸ,ಬಸವರಾಜ್, ಉದಯ ಸಾಹುಕಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾಮಾಜಿಕ
  • ಸಾಂಸ್ಕೃತಿಕ
  • ಮೂಲಸೌಕರ್ಯ

ಸಿರವಾರ:

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

ಚಾಗಭಾವಿ ಗ್ರಾಮದಲ್ಲಿ ಸೋಮವಾರ ಕೆಕೆಆರ್ ಡಿಬಿ ಅನುದಾನದಲ್ಲಿ 20ಲಕ್ಷ ರೂ. ವೆಚ್ಚದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಹಾಗೂ ಮಾನ್ವಿ-ಸಿರವಾರ ಮುಖ್ಯ ರಸ್ತೆ ಯಿಂದ ಚಾಗಭಾವಿ ಕ್ಯಾಂಪ್‌ನಲ್ಲಿ 1ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ನಂತರ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕೇವಲ ರಸ್ತೆ ನಿರ್ಮಾಣಕ್ಕೆ ಸೀಮಿತವಾಗದೆ, ಜನರಿಗೆ ಅಗತ್ಯವಿರುವ ಸಾರ್ವಜನಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮೂಲಸೌಕರ್ಯಗಳನ್ನು ಕಲ್ಪಿಸುವುದೂ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ. ಗ್ರಾಮದಲ್ಲಿ ನಿರ್ಮಾಣವಾಗಲಿರುವ ಶಾದಿ ಮಹಲ್‌ನಿಂದ ಮದುವೆ ಸಮಾರಂಭಗಳ ಜತೆಗೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಗ್ರಾಮಸ್ಥರಿಗೆ ಅನುಕೂಲವಾಗಲಿದೆ.
ಮುಖ್ಯ ಕಾಲುವೆಯ 89ಡಿಸ್ಟ್ರಿಬೂಟರ್‌ನಲ್ಲಿನ ಎರಡೂ ಭಾಗದ ರೈತರಿಗೆ, ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಂಪರ್ಕ ಮತ್ತಷ್ಟ ಸುಧಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು 1ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಶಾಸಕ ಹಂಪಯ್ಯ ನಾಯಕ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಸೌಲಭ್ಯ ಸೇರಿದಂತೆ ಮೂಲ ಅಗತ್ಯಗಳನ್ನು ಪೂರೈಸಲು ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನ ತರುವ ಪ್ರಯತ್ನ ಮುಂದುವರಿಸಲಾಗುವುದು ಎಂದರು.
ಸಿರವಾರ ಪಪಂ ಅಧ್ಯಕ್ಷ ಹಾಜಿಚೌದ್ರಿ, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ, ಶ್ರೀನಿವಾಸ್, ರಮೇಶ್ ದರ್ಶನಕರ್, ಚಂದು ಸಾಹುಕಾರ್ ಕಳಸ, ಬಸವರಾಜ, ಉದಯ ಸಾಹುಕಾರ್, ಮಲ್ಲಯ್ಯ, ವೀರನಗೌಡ, ರಾಘವೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net