ರಾಯಚೂರಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಬಸವಣ್ಣ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜದ ಮುಖಂಡರಾದ ಶಿವಾನಂದ ಚೌಕಿ, ಚಂದ್ರಶೇಖರ ಪಾಟೀಲ ಮಿರ್ಜಾಪುರ, ಪರಮೇಶ್ವರ ಸಾಲಿಮಠ, ನಾಗೇಶ್ವರಪ್ಪ, ಬಸವರಾಜ, ಚೆನ್ನಬಸವಣ್ಣ, ಜೆ.ಬಸವರಾಜ, ಆನಂದ ಪಾಟೀಲ, ಕಲ್ಲಯ್ಯ ಸ್ವಾಮಿ ಇದ್ದರು.
Published on:
Copied
Follow Us
ರಾಯಚೂರು ಜಿಲ್ಲಾಡಳಿತದಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.20ರಂದು ಸಂಭ್ರಮದಿಂದ ಆಚರಿಸಲಾಗುವುದೆಂದು ಎಡಿಸಿ ಶಿವಾನಂದ ಭಜಂತ್ರಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಬಸವ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂದು ಬೆಳಗ್ಗೆ 9ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಗ್ಗೆ 11ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಸರ್ಕಾರದ ಮಾರ್ಗಸೂಚಿಯನ್ವಯ ಜಯಂತಿ ಆಚರಣೆ ನಡೆಯಬೇಕು. ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸಬೇಕು. ಜಯಂತಿಗೆ ಆಗಮಿಸುವ ಜನತೆಗೆ ಕುಡಿಯುವ ನೀರು, ಉಪಹಾರ, ಆಸನದ ವ್ಯವಸ್ಥೆ ಮಾಡಬೇಕು ಎಂದು ಸಂಬಅಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತಿಯನ್ನು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ ಮಾಡುವಂತೆ ಆದೇಶ ಹೊರಡಿಸಲು ಕ್ರಮ ವಹಿಸಬೇಕು ಎಂದು ಸಂಬಅಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜದ ಮುಖಂಡರಾದ ಶಿವಾನಂದ ಚೌಕಿ, ಚಂದ್ರಶೇಖರ ಪಾಟೀಲ ಮಿರ್ಜಾಪುರ, ಪರಮೇಶ್ವರ ಸಾಲಿಮಠ, ನಾಗೇಶ್ವರಪ್ಪ, ಬಸವರಾಜ, ಚೆನ್ನಬಸವಣ್ಣ, ಜೆ.ಬಸವರಾಜ, ಆನಂದ ಪಾಟೀಲ, ಕಲ್ಲಯ್ಯ ಸ್ವಾಮಿ, ವೀರಪ್ಪಣ್ಣ ಗೌಡ ಬಂಡಿ ಇದ್ದರು.