ಕಾರ್ಯಕ್ರಮಕ್ಕೆ ಪೊಲೀಸ್ ಬಂದೋಬಸ್ತ್, ಕಲಾ ತಂಡಗಳ ನೇಮಕ, ಉಪನ್ಯಾಸಕರು, ಆಮಂತ್ರಣ ಪತ್ರಿಕೆ, ವೇದಿಕೆ, ಧ್ವನಿ-ಬೆಳಕು, ಆಸನ, ಕುಡಿಯುವ ನೀರು, ಉಪಾಹಾರ, ವ್ಯವಸ್ಥೆಯನ್ನು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಮನ್ವಯದಿಂದ ಮಾಡಬೇಕೆಂದು ಸಲಹೆ ನೀಡಿದರು. ಶ್ರೀ ಶಂಕರಾಚಾರ್ಯ ಜಯಂತಿಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.