ಕೆಂಪೇಗೌಡ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಪ್ರಮುಖರಾದ ಡಾ.ಬಿ.ವಿಜಯರಾಜೇಂದ್ರ, ನಾಗರಾಜ ವಕೀಲರು, ದೇವೇಂದ್ರಮ್ಮ ಟಿ.ಸಿ., ಕೆ.ಪಾರ್ವತಿ ಖಾಜಾನಗೌಡ, ಡಾ.ಶಾಂತಾ ಕುಲಕರ್ಣಿ, ರವೀಂದ್ರ ಪೊಲೀಸ್ ಪಾಟೀಲ್, ಮಹೇಶ ಬಿ. ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಪ್ರಮುಖರಾದ ಡಾ.ಬಿ.ವಿಜಯರಾಜೇಂದ್ರ, ನಾಗರಾಜ ವಕೀಲರು, ದೇವೇಂದ್ರಮ್ಮ ಟಿ.ಸಿ., ಕೆ.ಪಾರ್ವತಿ ಖಾಜಾನಗೌಡ, ಡಾ.ಶಾಂತಾ ಕುಲಕರ್ಣಿ, ರವೀಂದ್ರ ಪೊಲೀಸ್ ಪಾಟೀಲ್, ಮಹೇಶ ಬಿ. ಇದ್ದರು.
Published on
ರಾಯಚೂರು ನಾಡಿನ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಕೆಂಪೇಗೌಡ ಅವರ ಪರಿಶ್ರಮದಿಂದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಗಳಿಸಿದೆಂದು ಎಡಿಸಿ ಶಿವಾನಂದ ಭಜಂತ್ರಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಕೆಂಪೇಗೌಡ ಜಯಂತಿ ನಿಮಿತ್ತ ಸಮುದಾಯದ ಮುಖಂಡರು, ವಿವಿಧ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಕೆಂಪೇಗೌಡ ಅವರ ಜೀವನ ಸಾಧನೆಗಳನ್ನು ಸ್ಮರಿಸುವ ಸಲುವಾಗಿ ಇದೇ ಜೂನ್ 27 ರಂದು ನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜೂ.27ರಂದು ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಏರ್ಪಾಡು ಮಾಡಬೇಕು. ನಗರದ ಮುಖ್ಯ ರಸ್ತೆಗಳು ಮತ್ತು ಆವರಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಸಂಬಅಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕಾರ್ಯಕ್ರಮ ಯಶಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಇಲಾಖಾವಾರು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಶಾಲಾ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರವನ್ನು ನೀಡಬೇಕು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಡಾ.ಬಿ.ವಿಜಯರಾಜೇಂದ್ರ, ನಾಗರಾಜ ವಕೀಲರು, ದೇವೇಂದ್ರಮ್ಮ ಟಿ.ಸಿ., ಕೆ.ಪಾರ್ವತಿ ಖಾಜಾನಗೌಡ, ಡಾ.ಶಾಂತಾ ಕುಲಕರ್ಣಿ, ರವೀಂದ್ರ ಪೊಲೀಸ್ ಪಾಟೀಲ್, ಮಹೇಶ ಬಿ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net