ಜಿಲ್ಲಾ ಉಸ್ತುವಾರಿ ಸಚಿವರಿಂದ ಅಕ್ಕಕೆಫೆ ಉದ್ಘಾಟನೆ

ರಾಯಚೂರಿನ ಜಿಲ್ಲಾ ಪಂಚಾಯತ ಆವರಣದಲ್ಲಿ ಅನುಷ್ಠಾನಗೊಂಡಿರುವ ಸ್ವಸಹಾಯ ಗುಂಪಿನ ಮಹಿಳೆಯರ ಅಕ್ಕ ಕೆಫೆಯನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಿದರು. ಸಂಸದ ಜಿ.ಕುಮಾರ್ ನಾಯಕ್, ಶಾಸಕರಾದ ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಡಿಸಿ ಪೂವಿತಾ ಎಸ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ , ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ , ಅರುಣಾಂಗ್ಶು ಗಿರಿ, ಜಿ.ಪಂ.ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಯೋಜನಾ ನಿರ್ದೇಶಕ ಶರಣಬಸವರಾಜ ಇದ್ದರು.

Published on
ರಾಯಚೂರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಜಿಲ್ಲಾ ಪಂಚಾಯತ ಆವರಣದಲ್ಲಿ ಅನುಷ್ಠಾನಗೊಂಡಿರುವ ಸ್ವಸಹಾಯ ಗುಂಪಿನ ಮಹಿಳೆಯರ ಅಕ್ಕ ಕೆಫೆಯನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಿದರು.
ನಂತರ ಮಾತನಾಡಿ, ರಾಜ್ಯ ಸರ್ಕಾರ ಆರಂಭಿಸಿರುವ ಅಕ್ಕ ಕೆಫೆ ಯೋಜನೆಯ ಮುಖ್ಯ ಉದ್ದೇಶ ಗ್ರಾಮೀಣ ಮತ್ತು ಬಡ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಯಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸ್ವ- ಉದ್ಯೋಗಾವಕಾಶ ಕಲ್ಪಿಸಿ ಅವರ ಆತ್ಮವಿಶ್ವಾಸ ಹೆಚ್ಚಿಸುವುದು ಪ್ರಮುಖ ಗುರಿಯಾಗಿದೆ ಎಂದರು.
ಮಹಾಲಕ್ಷ್ಮೀ ಸ್ವಸಹಾಯ ಸಂಘ, ವಡ್ಲೂರು ಮಹಿಳೆಯರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆಸುತ್ತ ಸದರಿ ಗುಂಪಿನಲ್ಲಿ ಅತಿ ಕಡುಬಡತನದ ಮಹಿಳೆಯರು ಸೇರಿ ಅಕ್ಕ ಕೆಫೆಯನ್ನು ಸಮಪರ್ಕವಾಗಿ ನಿರ್ವಹಣೆ ಮಾಡಿಕೊಂಡು ಹೋಗುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅತುತ್ಯಮವಾಗಿ ನಿರ್ವಹಿಸಿಕೊಂಡು ಹೋಗಬೇಕು, ಕಡಿಮೆ ದರದಲ್ಲಿ ಶುಚಿರುಚಿಯಾದ ಆಹಾರ ಪದಾರ್ಥಗಳನ್ನು ತಯಾರಿಸಿ ನೀಡುವದರೊಂದಿಗೆ ಗ್ರಾಹಕರನ್ನು ಅಕ್ಕಕೆಫೆಯಡಿ ಸೆಳೆಯುವಂತೆ ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ್ ನಾಯಕ್, ಶಾಸಕರಾದ ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಡಿಸಿ ಪೂವಿತಾ ಎಸ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ , ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ , ಅರುಣಾಂಗ್ಶು ಗಿರಿ, ಜಿ.ಪಂ.ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಯೋಜನಾ ನಿರ್ದೇಶಕ ಶರಣಬಸವರಾಜ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net