ಏ.14 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ

vidya patil
vidya patil
Published on
ರಾಯಚೂರು ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಗುಣಾತ್ಮಕ ಶಿಕ್ಷಣ ನೀಡುವಂತೆ ಒತ್ತಾಯಿಸಿ ಏ.14 ರಂದು ಸರ್ಕಾರದ ವಿರುದ್ಧ ರಾಜ್ಯದ 20 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಸಂಚಾಲಕಿ ವಿದ್ಯಾಪಾಟೀಲ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ನಗರದ ಡಾ.ಬಿ.ಆರ್. ಅಂಬೇಡ್ಕರ್‌ವೃತ್ತದಲ್ಲಿ ಅಹೋರಾತ್ರಿ ಧರಣಿ ಏ.15ರ ಬೆಳಗ್ಗೆ ವರೆಗೂ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಗುತ್ತದೆ. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಸೇರಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಬೇಕು. ಪ್ರತಿಯೊಂದು ಶಾಲೆಗೂ ಒಬ್ಬ ಪರಿಚಾರಕರನ್ನು ನೇಮಿಸಬೇಕು. ಸರ್ಕಾರ ಕೆಪಿಎಸ್, ಮ್ಯಾಗ್ನೆಟ್ ಶಾಲೆಗಳನ್ನು ತಕ್ಷಣ ನಿಲ್ಲಿಸಬೇಕೆಮದು ಒತ್ತಾಯಿಸಿದರು.
ಸಂಚಾಲಕ ಸೈಯದ್ ಹಪೀಜುಲ್ಲಾ ಮಾತನಾಡಿ, ಸರ್ಕಾರ ಇಷ್ಟು ದಿನ ನಲಿಕಲಿ ತರಗತಿಗಳನ್ನು ನಡೆಸಿ, ಇದೀಗ ತೆಗೆಯಲು ಹೊರಟಿದೆ. ಮುಂದೆಯೂ ಮ್ಯಾಗ್ನೆಟ್ ಶಾಲೆ ಮಾಡಿ, ತೆಗೆಯುತ್ತದೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಮಚಿತರಾಗುತ್ತಾರೆ. ಜತೆಗೆ ಹಳ್ಳಿಗಲಲ್ಲಿ ಶಾಲೆಗಳು ಮುಚ್ಚಿ ಹೋಗುತ್ತವೆ. ಸರ್ಕಾರ ಕೂಡಲೇ ಆರ್‌ಟಿಇ ಕಾಯ್ದೆಯಡಿಯಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಮೋಕ್ಷಮ್ಮ, ಶಿವರಾಮ, ವಿರೂಪಮ್ಮ, ಮಾರೆಮ್ಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net