ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.90 ರಷ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆಂದು ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು ಮೇ.25 ರೊಳಗೆ ಅರ್ಜಿಗಳನ್ನು ಸಮಾಜದ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.ಸದಸ್ಯತ್ವ ಅರ್ಜಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಐಡಿ ಸಂಖ್ಯೆ 16032 ಚಂದ್ರಶೇಖರ ಪಾಟೀಲ್ ಮಿರ್ಜಾಪುರ ಎಂದು ನಮೂದಿಸಿ ಅರ್ಜಿ ಸಲ್ಲಿಸಬೇಕು. ನಿಗದಿತ ದಿನಾಂಕ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವದಿಲ್ಲ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಭೀಮರೆಡ್ಡಿ ಕಲ್ಲೂರು, ಡಾ.ಸೋಮನಾಥ ರೆಡ್ಡಿ, ಡಾ.ಪರಮೇಶ್ವರಪ್ಪ ಸಾಲಿಮಠ, ಸುಲೋಚನಾ ಬಸವರಾಜಸ್ವಾಮಿ, ಚನ್ನಬಸವಗೌಡ ಇದ್ದರು.