ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಎನ್.ವಿಜಯಾ ಮೂರ್ತಿ
ಎನ್.ವಿಜಯಾ ಮೂರ್ತಿ
Published on

ಪ್ರಮುಖ ಮುಖ್ಯಾಂಶಗಳು

  • ಫೆ.20ರೊಳಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ
  • ಲಿಂಗಸುಗೂರು ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿ
ಲಿಂಗಸುಗೂರು: ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ ರೈತರು, ರೈತ ಮಹಿಳೆಯರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಫೆ.20ರೊಳಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಸಾಧನೆ ಪರಿಗಣನೆ: ಕೃಷಿ ಕ್ಷೇತ್ರದಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ಕೃಷಿ ಸಂಸ್ಕರಣೆ ಕಾರ್ಯವನ್ನು ಪರಿಗಣಿಸಲಾಗುವುದು. ತೋಟಗಾರಿಕೆ ಕ್ಷೇತ್ರದಲ್ಲಿ ಸಮಗ್ರ ತೋಟಗಾರಿಕೆ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ), ಪಶು ಸಂಗೋಪನೆ ಕ್ಷೇತ್ರದಲ್ಲಿ ಹೈನುಗಾರಿಕೆ, ಮೇಕೆ, ಕುರಿ, ಮೊಲ, ಕೋಳಿ, ಹಂದಿ ಸಾಕಾಣಿಕೆ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ಸಾಧನೆ ಮಾಡಿರಬೇಕು. ಇನ್ನೂ ಮೀನುಗಾರಿಕೆ, ರೇಷ್ಮೆ, ಅರಣ್ಯ ಕೃಷಿಯ ಸಾಧಕರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಜಿಲ್ಲೆಯ 10 ರೈತರಿಗೆ ನೀಡಲಾಗುವುದು. (ಒಂದು ಕ್ಷೇತ್ರಕ್ಕೆ ಎರಡರಂತೆ) ತಲಾ 25 ಸಾವಿರ ರೂ. ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗಳಿಗೆ ಆಯ್ಕೆಯಾದ ತಾಲೂಕಿನ ಐದು ರೈತರಿಗೆ (ಆಯ್ಕೆಯಾದ ಐದು ಕ್ಷೇತ್ರಗಳಲ್ಲಿ ಒಬ್ಬರಂತೆ) ತಲಾ 10 ಸಾವಿರ ರೂ. ನೀಡಲಾಗುವುದು.
ನೌಕರರು ಭಾಗವಹಿಸುವಂತಿಲ್ಲ: ಸರ್ಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ ನೌಕರರು, ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ನೌಕರರು, ಅವರ ಕುಟುಂಬದವರನ್ನು ಮತ್ತು ಇಲಾಖೆಯ ನಿವೃತ್ತ ತಾಂತ್ರಿಕೇತರ ನೌಕರರನ್ನು ಹೊರತುಪಡಿಸಿ, ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಕುಟುಂಬದವರು ಭಾಗವಹಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಎನ್.ವಿಜಯಾ ಮೂರ್ತಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net