ಅಗತ್ಯ ಶಿಕ್ಷಕರು, ವೈದ್ಯರ ನೇಮಕ ಮಾಡಿ

ಸಿಂಧನೂರಿನಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಸಿಪಿಐಎಂ ತಾಲೂಕು ಘಟಕ ಮಂಗಳವಾರ ಮನವಿ ಸಲ್ಲಿಸಿತು. ತಾಲೂಕು ಕಾರ್ಯದರ್ಶಿ ಬಸವಂತರಾಯಗೌಡ ಕಲ್ಲೂರು, ಗೋಪಾಲಕೃಷ್ಣ, ಯಂಕಪ್ಪ ಕೆಂಗಲ್ ಇತರರಿದ್ದರು.
ಸಿಂಧನೂರಿನಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಸಿಪಿಐಎಂ ತಾಲೂಕು ಘಟಕ ಮಂಗಳವಾರ ಮನವಿ ಸಲ್ಲಿಸಿತು. ತಾಲೂಕು ಕಾರ್ಯದರ್ಶಿ ಬಸವಂತರಾಯಗೌಡ ಕಲ್ಲೂರು, ಗೋಪಾಲಕೃಷ್ಣ, ಯಂಕಪ್ಪ ಕೆಂಗಲ್ ಇತರರಿದ್ದರು.
Published on
ಸಿಂಧನೂರು: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ತಾಲೂಕು ಸಮಿತಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಮನವಿ ಸಲ್ಲಿಸಿತು.
ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಂಜೂರಾದ 1585 ಶಿಕ್ಷಕರ ಹುದ್ದೆಗಳ ಪೈಕಿ 816 ಭರ್ತಿ ಮಾಡಲಾಗಿದೆ. ಅರ್ಧದಷ್ಟು ಹುದ್ದೆಗಳು ಖಾಲಿ ಇವೆ. 11 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ವೈದ್ಯರಿಲ್ಲ. ಇದರಿಂದ ಗ್ರಾಮೀಣ ಜನರಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ. ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೂ ಮೂಲಸೌಲಭ್ಯ ಒದಗಿಸಬೇಕು. ನಗರದಲ್ಲಿ ಯುಜಿಡಿ ಕಾಮಗಾರಿ ಅರೆಬರೆಯಾಗಿದ್ದು ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ನಗರದ 25ನೇ ವಾರ್ಡ್‌ನಲ್ಲಿ ಮಹಿಳಾ ಶೌಚಗೃಹವಿಲ್ಲ. ನಿರ್ಮಾಣಕ್ಕೂ ಮೀನಮೇಷ ಎಣಿಸಲಾಗುತ್ತಿದೆ. ತಾಲೂಕಿನಲ್ಲಿ ಸ್ಮಶಾನ ಭೂಮಿ ಕೊರತೆ ಇದೆ. ಬೊಮ್ಮನಾಳ-ದೇವರಗುಡಿ ಮಧ್ಯದ ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ನರೇಗಾದಲ್ಲಿ ಕೆಲಸ ನಿರ್ವಹಿಸಿದ ಕೂಲಿಕಾರರಿಗೂ ಕೂಲಿ ಪಾವತಿ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಸಮಿತಿ ತಾಲೂಕು ಕಾರ್ಯದರ್ಶಿ ಬಸವಂತರಾಯಗೌಡ ಕಲ್ಲೂರು, ಗೋಪಾಲಕೃಷ್ಣ, ಯಂಕಪ್ಪ ಕೆಂಗಲ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net