ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಫೆ.5 ರಿಂದ 7ರವರೆಗೆ ನಡೆಯಲಿರುವ ರಾಯಚೂರು ಉತ್ಸವದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಐತಿಹಾಸಿಕ ಪರಂಪರೆ ಸೇರಿ ಮಕ್ಕಳಿಂದ ವೃದ್ಧರವರೆಗೆ ಮನೋಲ್ಲಾಸವಾಗುವ ಕಾರ್ಯಕ್ರಮಗಳು ನಡೆಯಲಿವೆ. ಇದರ ಅಂಗವಾಗಿ ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ವಿವಿಧ ಕ್ರೀಡಾಕೂಟಗಳು, ಮ್ಯಾರಥಾನ್ ಹಾಗೂ ಸ್ಪರ್ಧೆಗಳು ನಡೆಯುತ್ತಿವೆ.