ಗ್ರಂಥಾಲಯದಲ್ಲಿ ಚಹಾ, ಬಿಸ್ಕತ್ ವ್ಯವಸ್ಥೆ ಮಾಡಿ

ಈಶ್ವರ ಕುಮಾರ ಕಾಂದೂ
ಈಶ್ವರ ಕುಮಾರ ಕಾಂದೂ
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಪಂ ವ್ಯಾಪ್ತಿಯ ಲೈಬ್ರರಿಗಳಿಗೆ ಜಿಪಂ ಸಿಇಒ ಸೂಚನೆ
ರಾಯಚೂರು: ಎಸ್ಸೆಸ್ಸೆಲ್ಸಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಂಥಾಲಯಗಳಲ್ಲಿ ಸಂಜೆ ವೇಳೆ ಪ್ರತಿ ದಿನ ಚಹಾ ಮತ್ತು ಬಿಸ್ಕತ್ ವ್ಯವಸ್ಥೆ ಮಾಡಬೇಕೆಂದು ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ ಅವರು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಂಥಪಾಲಕರಿಗೆ ನಿರ್ದೇಶನ ನೀಡಿದ್ದಾರೆ.
ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಗ್ರಾಪಂ ವ್ಯಾಪ್ತಿಯ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಉತ್ತಮ ಓದುವ ವಾತಾವರಣದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಗ್ರಾಪಂ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತೆ ಕಾರ್ಯನಿರ್ವಹಿಸಬೇಕು.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಗ್ರಾಪಂ ಗ್ರಂಥಾಲಯಗಳ ಸಮಯ ಬದಲಾವಣೆ ಹಾಗೂ ಅಭ್ಯಾಸ ಮಾಡಲು ಅಗತ್ಯ ಸೌಲಭ್ಯ ಒದಗಿಸಬೇಕು. ಗ್ರಂಥಾಲಯಗಳು ಪ್ರಸ್ತುತ ಇರುವ ಬೆಳಗ್ಗೆ 9 ರಿಂದ ಸಂಜೆ 6.30 ರವರೆಗೆ ಇರುವ ಸಮಯದ ಹೊರತಾಗಿ ವಿದ್ಯಾರ್ಥಿಗಳ ಓದುವ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಕಾಲಾವಕಾಶ ಕಲ್ಪಿಸಬೇಕು. 
ಗ್ರಾಮ ಪಂಚಾಯತಿಗಳು ವಿಶೇಷ ಕಾಳಜಿ ವಹಿಸಿ ಗ್ರಂಥಾಲಯಗಳಲ್ಲಿ ಸ್ವಚ್ಛತೆ, ಸಮರ್ಪಕ ಬೆಳಕು ಹಾಗೂ ಕುಳಿತುಕೊಳ್ಳುವ ಆಸನ ವ್ಯವಸ್ಥೆಗಳನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಓದಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net