ಸಚಿವರಿಗೆ ೇರಾವ್ ಹಾಕಿದವರ ಬಂಧನ- ಬಿಡುಗಡೆ

ರಾಯಚೂರಿಗೆ ಸ್ಥಳೀಯ ಸಚಿವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸದೆ, ಹೊರ ಜಿಲ್ಲೆಯ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದನ್ನು  ವಿರೋಧಿಸಿ ಪ್ರತಿಭಟನೆ ಮಾಡಿದ ಪ್ರತಿಭಟನೆಕಾರರನ್ನು ಪೊಲೀಸರು ಶನಿವಾರ ಬಂಧನ ಮಾಡಿದರು.
ರಾಯಚೂರಿಗೆ ಸ್ಥಳೀಯ ಸಚಿವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸದೆ, ಹೊರ ಜಿಲ್ಲೆಯ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ಪ್ರತಿಭಟನೆಕಾರರನ್ನು ಪೊಲೀಸರು ಶನಿವಾರ ಬಂಧನ ಮಾಡಿದರು.
Published on

ಜಿಲ್ಲೆಗೆ ಸ್ಥಳೀಯ ಸಚಿವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸದೆ, ಹೊರ ಜಿಲ್ಲೆಯ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದನ್ನು  ವಿರೋಧಿಸಿ ಪ್ರತಿಭಟನೆ ಮಾಡಿದ ಪ್ರತಿಭಟನೆಕಾರರನ್ನು ಪೊಲೀಸರು ಶನಿವಾರ ಬಂಧನ ಮಾಡಿ ಬಿಡುಗಡೆ ಮಾಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ  ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ನಾಗರಿಕರ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಫೇರಾವ್ ಹಾಕಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗೋ ಬ್ಯಾಕ್, ಗೋ ಬ್ಯಾಕ್ ಅಜಯ್ ಸಿಂಗ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.
ಜಿಲ್ಲೆಗೆ ಸ್ಥಳೀಯ ಸಚಿವರನ್ನೇ ಜಿಲ್ಲಾ ಉಸ್ತುವಾರಿ ಯನ್ನಾಗಿ ನೇಮಿಸಬೇಕು. ಜಿಲ್ಲೆಯಲ್ಲಿ ಹಲವು ಶಾಸಕರು ಹಾಗೂ ಜನ ಪ್ರತಿನಿಧಿಗಳಿದ್ದರೂ ಅವರಿಗೆ ಸಚಿವ ಸ್ಥಾನ ನೀಡದೆ ಸರ್ಕಾರ ಅನ್ಯಾಯ ಮಾಡಿದೆ. 
ಸ್ಥಳೀಯ ಸಮಸ್ಯೆಗಳು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಮೂಲಭೂತ ಬೇಡಿಕೆಗಳ ಬಗ್ಗೆ ಸಂಪೂರ್ಣ ಅರಿವು ಹೊಂದಿರುವ ಸ್ಥಳೀಯ ಜನಪ್ರತಿನಿಧಿಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ. ಜಿಲ್ಲೆಯ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡದೆ, ಹೊರ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದು ಜಿಲ್ಲೆಯ ಜನರಿಗೆ ಮಾಡಿರುವ ಅನ್ಯಾಯ ಎಂದು ಆರೋಪಿಸಿದರು. ಹೊರ ಜಿಲ್ಲೆಯ ಸಚಿವರಿಂದ ಧ್ವಜಾರೋಹಣ ಮಾಡಿಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ, ಜಿಲ್ಲಾ ಉಸ್ತುವಾರಿ ಬದಲಾವಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ವಕೀಲ ಎಸ್. ಮಾರೆಪ್ಪ, ರವೀಂದ್ರನಾಥ ಪಟ್ಟಿ, ಅಶೋಕ ಕುಮಾರ, ಸಿ.ಕೆ. ಜೈನ್, ಎಂ.ಆರ್.ಭೇರಿ, ವಿಶ್ವನಾಥ ಪಟ್ಟಿ, ಅಮರೇಗೌಡ ಪಾಟೀಲ್, ನರಸಪ್ಪ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net