ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ

ಆಲಿಕಲ್ಲು ಮಳೆಯಿಂದ ಬೆಳೆಹಾನಿಯಾದ ದೇವದುರ್ಗ ತಾಲೂಕಿನ ಪರ್ತಾಪುರಗೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಭೇಟಿನೀಡಿ ಪರಿಶೀಲಿಸಿದರು. ಜಿಲ್ಲಾಧ್ಯಕ್ಷ ಶಿವಪುತ್ರಪ್ಪಗೌಡ, ಮಲ್ಲೇಶ್ ನಾಯಕ, ತಾಲೂಕು ಅಧ್ಯಕ್ಷ ಮರಿಲಿಂಗ ಪಾಟೀಲ್, ಪ್ರಮುಖರಾದ ಉಮಾದೇವಿ ನಾಯಕ, ಬಸವರಾಜ್ ಗೋಡಿಹಾಳ ಇದ್ದರು.
ಆಲಿಕಲ್ಲು ಮಳೆಯಿಂದ ಬೆಳೆಹಾನಿಯಾದ ದೇವದುರ್ಗ ತಾಲೂಕಿನ ಪರ್ತಾಪುರಗೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಭೇಟಿನೀಡಿ ಪರಿಶೀಲಿಸಿದರು. ಜಿಲ್ಲಾಧ್ಯಕ್ಷ ಶಿವಪುತ್ರಪ್ಪಗೌಡ, ಮಲ್ಲೇಶ್ ನಾಯಕ, ತಾಲೂಕು ಅಧ್ಯಕ್ಷ ಮರಿಲಿಂಗ ಪಾಟೀಲ್, ಪ್ರಮುಖರಾದ ಉಮಾದೇವಿ ನಾಯಕ, ಬಸವರಾಜ್ ಗೋಡಿಹಾಳ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉಗ್ರ ಹೋರಾಟ

ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ

ದೇವದುರ್ಗ: ಆಲಿಕಲ್ಲು ಹಾಗೂ ಅಕಾಲಿಕ ಮಳೆಯಿಂದ ರೈತರ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸರ್ಕಾರ ತಕ್ಷಣವೇ ವೈಜ್ಞಾನಿಕ ಪರಿಹಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ತಾಲೂಕಿನ ಪರ್ತಾಪುರ, ಹೂನೂರು, ಅರಶಿಣಗಿ ಗ್ರಾಮಕ್ಕೆ ಬುಧವಾರ ಭೇಟಿನೀಡಿ ಆಲಿಕಲ್ಲು ಮಳೆಯಿಂದ ಹಾನಿಯಾದ ಬೆಳೆಗಳನ್ನು ಪರಿಶೀಲಿಸಿ ಮಾತನಾಡಿದರು. ರೈತರು ವಿವಿಧ ಕಾರಣಕ್ಕೆ ಬೆಳೆ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಲಿಕಲ್ಲು ಮಳೆಯಿಂದ ಮೆಣಿನಕಾಯಿ ಹಾಗೂ ಭತ್ತದ ಬೆಳೆಗಳು ಹಾಳಾಗಿವೆ. ಬೆಳೆಹಾನಿಯಾಗಿದ್ದರೂ ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಸಮಯದಲ್ಲಿ ಸಮೀಕ್ಷೆ ನಡೆಸದೆ ನಿರ್ಲಕ್ಷ್ಯವಹಿಸಿದ್ದಾರೆ.
ರಾಯಚೂರು ಜಿಲ್ಲೆ ಮಾತ್ರವಲ್ಲ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದಲ್ಲಿ ರೈತರ ಆಲಿಕಲ್ಲು ಮಳೆಗೆ ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಮುಂಗಾರು ಹಾಗೂ ಹಿಂಗಾರಿನಲ್ಲಿ ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಅರೆಬರೆ ಪರಿಹಾರ ನೀಡಿತ್ತು. ಸರ್ಕಾರ ರೈತರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ಬೆಳೆಹಾನಿ ಪ್ರದೇಶಕ್ಕೆ ಅಧಿಕಾರಿಗಳನ್ನು ಕಳಿಸಿ ವೈಜ್ಞಾನಿಕ ಸಮೀಕ್ಷೆ ಮಾಡಬೇಕು. ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದರು.
ರಾಜ್ಯ ಕಾರ್ಯದರ್ಶಿ ಮಲ್ಲನಗೌಡ, ಜಿಲ್ಲಾಧ್ಯಕ್ಷ ಶಿವಪುತ್ರಪ್ಪ ಗೌಡ, ಯುವ ಘಟಕ ಜಿಲ್ಲಾಧ್ಯಕ್ಷ ಮಲ್ಲೇಶ್ ನಾಯಕ, ತಾಲೂಕು ಅಧ್ಯಕ್ಷ ಮರಿಲಿಂಗ ಪಾಟೀಲ್, ಪ್ರಮುಖರಾದ ಉಮಾದೇವಿ ನಾಯಕ, ಬಸವರಾಜ್ ಗೋಡಿಹಾಳ, ರಮೇಶ್ ನಾಯಕ, ಹರ್ಷವರ್ಧನ್, ನಾಗರಾಜ್, ಹನುಮಗೌಡ ಚಡಕಲಗುಡ್ಡ, ಅನಿಲ್‌ಗೌಡ, ಪರಮಣ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net