ಲಿಂಗಸುಗೂರಲ್ಲಿ ಬಿಡಾಡಿ ದನಗಳ ಹಾವಳಿ ತಪ್ಪಿಸಿ

ಲಿಂಗಸುಗೂರಿನಲ್ಲಿ ಎಸಿ ಬಸವಣೆಪ್ಪ ಕಲಶೆಟ್ಟಿಗೆ ಛಾವಣಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘ ಮನವಿ ಸಲ್ಲಿಸಿತು. ಸಂಘದ ತಾಲೂಕು ಅಧ್ಯಕ್ಷ ಸುಮಂತ ಕನಕಗಿರಿ, ಪ್ರಧಾನ ಕಾರ್ಯದರ್ಶಿ ಸಿದ್ದು ಬಡಿಗೇರ, ವೆಂಕಟೇಶ ಕೊಂಪಲ್, ಅಮರೇಶ ಗಂಭೀರಮಠ, ಉದಯ ಬಾಗಲವಾಡ, ಮಧುಸೂದ ರಾಠಿ, ಅಮಿತ್ ಮೆಹತಾ, ಸುಧೀರ ಶ್ರೀವಾಸ್ತವ, ಮಲ್ಲಿಕಾರ್ಜುನ ಕೆಂಭಾವಿ, ಮಲ್ಲಯ್ಯ ಸ್ವಾಮಿ ಇದ್ದರು.

Published on
ಲಿಂಗಸುಗೂರು: ನಗರದಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಒತ್ತಾಯಿಸಿ ಛಾವಣಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘ ಗುರುವಾರ ನಗರದಲ್ಲಿ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿಗೆ ಮನವಿ ಸಲ್ಲಿಸಿತು.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ಚಲಿಸಿದರೆ ಧೂಳು ಏಳುತ್ತದೆ. ಇದರಿಂದ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಬಿಡಾಡಿ ದನಗಳು, ಬೀದಿ ನಾಯಿಗಳ ಹಾವಳಿಯಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಸ್ಥಳಾಂತರಿಸಬೇಕು. ಬಸ್ ನಿಲ್ದಾಣ ವೃತ್ತ ಮತ್ತು ಬಸವಸಾಗರ ವೃತ್ತದ ಸರ್ವಿಸ್ ರಸ್ತೆಗಳು ಅತಿಕ್ರಮಿಸಿಕೊಂಡು ವ್ಯಾಪಾರಿಗಳಿಂದ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಹಣ್ಣು ಮತ್ತು ತರಕಾರಿ ಮಾರುವವರು ಕೊಳೆತ ತ್ಯಾಜ್ಯವನ್ನು ರಸ್ತೆ ಮೇಲೆ ಎಸೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ತಗ್ಗು ಗುಂಡಿಗಳನ್ನು ಮುಚ್ಚಬೇಕು. ಕುಡಿವ ನೀರಿನ ಪೈಪ್‌ಲೈನ್ ಬೇಕಾಬಿಟ್ಟಿ ಅಳವಡಿಸಿರುವುದರಿಂದ ರಸ್ತೆಗಳು ಹದಗೆಟ್ಟಿದ್ದು ದುರಸ್ತಿಗೊಳಿಸಬೇಕು. ಬಡಾವಣೆಗಳ ಖಾಲಿ ಜಾಗಗಳಲ್ಲಿ ಬೆಳೆದ ಜಾಲಿ ಗಿಡಗಳನ್ನು ತೆರವುಗೊಳಿಸಲು ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಬಸ್ ನಿಲ್ದಾಣ ವೃತ್ತದ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ವ್ಯಾಪಾರಸ್ಥರು ತ್ಯಾಜ್ಯ ವಸ್ತು ರಸ್ತೆ ಮೇಲೆ ಎಸೆಯುವುದನ್ನು ತಡೆಯಬೇಕು. ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಗೃಹ ನಿರ್ಮಿಸಬೇಕು. ಬೀದಿ ದೀಪಗಳನ್ನು ದುರಸ್ತಿ ಮಾಡಬೇಕು. ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಪ್ರಮುಖರಾದ ಘನ ಶಾಮ್, ಶೀತಲ ಡಾಗಾ, ಬಸವರಾಜ ಐದನಾಳ, ಚಂದನ್ ಡಾಗಾ, ಬಸವರಾಜ ಓಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net