ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಕುರಿತು ತರಬೇತಿ ಕಾರ್ಯಕ್ರಮವನ್ನು ಸಂಸದ ಜಿ.ಕುಮಾರ ನಾಯಕ ಉದ್ಘಾಟಿಸಿದರು. ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಎಂಎಲ್ಸಿ ಎ.ವಸಂತಕುಮಾರ, ಪ್ರಮುಖರಾದ ಮಹ್ಮದ್ ಶಾಲಂ, ಕೆ.ಶಾಂತಪ್ಪ, ರಾಮಣ್ಣ ಇರಬಗೇರಾ, ಅಸ್ಲಂ ಪಾಷಾ, ಶ್ರೀ ದೇವಿ ನಾಯಕ ಇದ್ದರು.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಸಂಸದ ಆರೋಪ
ರಾಯಚೂರು
ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಕಾರಣ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಎಸ್‌ಐಆರ್ ಕುರಿತು ಪಕ್ಷದಿಂದ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ದೇಶದಲ್ಲಿ ದೇಶದಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಬೂತ್ ಮಟ್ಟದಿಂದ ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಎಸ್‌ಐಆರ್‌ನಿಂದ ಸಾಕಷ್ಟು ಅನಾಹುತಗಳಾಗಿದ್ದು, ಪಶ್ಚಿಮ ಬಂಗಾಳದಲ್ಲಿ 30 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿತ್ತು. ಇದೊಂದು ಕಳವಳಕಾರಿ ವಿಷಯವಾಗಿದೆ. ತರಬೇತಿಯನ್ನು ಸರಿಯಾಗಿ ಪಡೆದುಕೊಂಡು ಬೂತ್‌ಗಳ ಏಜೆಂಟರ್‌ಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡಬೇಕು ಎಂದರು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದುಕೊಂಡು, ಅರ್ಹ ಮತದಾರರನ್ನೂ ಕೂಡ ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮೂಲಕ ಮತದಾರರಿಗೆ ವಂಚನೆ ಮಾಡಿದೆ. ಈ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು. ಸೈನಿಕ, ಸಿಫಾಯಿಯಂತೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಎಜೆಂಟ್‌ಗಳು ಆಯಾ ಬ್ಲಾಕ್‌ನ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಜಂಟಿಯಾಗಿ ಎಸ್‌ಐಆರ್ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಎಂಎಲ್ಸಿ ಎ.ವಸಂತಕುಮಾರ, ಪ್ರಮುಖರಾದ ಮಹ್ಮದ್ ಶಾಲಂ, ಕೆ.ಶಾಂತಪ್ಪ, ರಾಮಣ್ಣ ಇರಬಗೇರಾ, ಅಸ್ಲಂ ಪಾಷಾ, ಶ್ರೀ ದೇವಿ ನಾಯಕ, ಮಲ್ಲಿಕಾರ್ಜುನ ಯದ್ದಲದೊಡ್ಡಿ ಸೇರಿ ಅನೇಕರು ಇದ್ದರು.