ಮೇ 17 ರಂದು ಜಾಗೃತಿ ಸಮಾವೇಶ

ಮಹೇಂದ್ರ ನಾಯಕ
ಮಹೇಂದ್ರ ನಾಯಕ
Published on
ರಾಯಚೂರು
ಶ್ರೀ ಅದಿಕವಿ ಭಗವಾನ್ ಮಹರ್ಷಿ ಯುವ ಬ್ರಿಗೇಡ್ ಸಂಘದ ವತಿಯಿಂದ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಸಿರವಾರ ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ವಾಲ್ಮೀಕಿ ಜಾಗೃತಿ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆಂದು ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ ನಾಯಕ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದ ಸಾನಿಧ್ಯವನ್ನು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಹಾಗೂ ಶ್ರೀ ವರದಾನೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಸನಗೌಡ ದದ್ದಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾನ್ವಿ ಶಾಸಕ ಹಂಪಯ್ಯ ನಾಯಕ ವಹಿಸಲಿದ್ದಾರೆ. ಸಮಾವೇಶದಲ್ಲಿ 2 ಸಾವಿರಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪ್ರತಿ ತಾಲೂಕಿನ 10 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ರವಿಕುಮಾರ,ವೀರೆಶ ನಾಯಕ , ಪ್ರಕಾಶ ನಾಯಕ, ಮಲ್ಲಿಕಾರ್ಜುನ ನಾಯಕ, ಹನುಮೇಶ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net