ವೀರಾಪುರ-ಬೋಗಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು. ಎಪಿಎಂಸಿ ಮಾಜಿ ಸದಸ್ಯ ಶಂಕರಗೌಡ ಉಮಲೂಟಿ, ಗ್ರಾಪಂ ಮಾಜಿ ಅಧ್ಯಕ್ಷ ವೆಂಕೋಬ ನಾಯಕ, ಯಮನಪ್ಪ ಇದ್ದರು.
ಸಿಂಧನೂರು: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಬಹುತೇಕ ಹಳ್ಳಿಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ತಾಲೂಕಿನ ವೀರಾಪುರದಿಂದ ಬೋಗಾಪುರ ಗ್ರಾಮಕ್ಕೆ ಸಂಪರ್ಕಿಸುವ ಒಂದು ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕಾಮಗಾರಿ ಕಳಪೆಯಾಗದಂತೆ ಸಾರ್ವಜನಿಕರು ಎಚ್ಚರವಹಿಸಿ ಮಾಡಿಸಿಕೊಳ್ಳಬೇಕು ಎಂದರು.
ಎಪಿಎಂಸಿ ಮಾಜಿ ಸದಸ್ಯ ಶಂಕರಗೌಡ ಉಮಲೂಟಿ, ಗ್ರಾಪಂ ಮಾಜಿ ಅಧ್ಯಕ್ಷ ವೆಂಕೋಬ ನಾಯಕ, ಯಮನಪ್ಪ, ಅಮರಣ್ಣ, ಯಮನೂರು, ನಾಗಪ್ಪ, ರಾಮಣ್ಣ, ಗಿಡ್ಡಪ್ಪ, ಛತ್ರಪ್ಪ, ರಮೇಶ, ದ್ಯಾಮಣ್ಣ, ಪಿಎಂಜಿಎಸ್‌ವೈ ಎಇಇ ಭರತ, ಪ್ರಥಮ ದರ್ಜೆ ಗುತ್ತಿಗೆದಾರ ಖಾಜಾ ಪಾಷಾ ಇದ್ದರು.