ಪರೀಕ್ಷೆ ಎದುರಿಸಲು ಆತ್ಮವಿಶ್ವಾಸ ತುಂಬಿ

ರವಾರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ವೈ.ಭೂಪನಗೌಡ ಅವರು ಮಕ್ಕಳಿಗೆ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಿದರು.
ರವಾರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ವೈ.ಭೂಪನಗೌಡ ಅವರು ಮಕ್ಕಳಿಗೆ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಿದರು.
Published on
ಪರೀಕ್ಷೆ ಎದುರಿಸಲು ಆತ್ಮವಿಶ್ವಾಸ ತುಂಬಿ Be confident to face the exam
ಸಿರವಾರ: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟವಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಸುರೇಶ ಶೆಟ್ಟಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಎಸ್ಸೆಸ್ಸೆಲ್ಸಿಯಲ್ಲಿ ಮಾಡಿದ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಅಭ್ಯಾಸ ನಡೆಸಿ ಉತ್ತಮ ಅಂಕ ಪಡೆಯಬೇಕು. ಪ್ರಸಕ್ತ ಸಾಲಿನಲ್ಲಿ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ. 
ಮುಖ್ಯವಾಗಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರಣೆ ನೀಡಬೇಕು. ವಿದ್ಯಾರ್ಥಿಗಳು ತರಗತಿಗಳಲ್ಲಿ ಪಾಠ ಕೇಳುವುದರ ಜತೆಗೆ ಮನೆಯಲ್ಲಿ ಉತ್ತಮ ಅಭ್ಯಾಸ ಮಾಡಿದರೆ ಹೆಚ್ಚಿನ ಅಂಕ ಗಳಿಸಲು ಸಾಧ್ಯ ಎಂದರು. ನಂತರ ಪಪಂ ಅಧ್ಯಕ್ಷ ವೈ.ಭೂಪನಗೌಡ ಅವರು ಮಕ್ಕಳಿಗೆ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿತರಣೆ ಮಾಡಿದರು.
ಪ್ರಭಾರ ಮುಖ್ಯಶಿಕ್ಷಕ ದೇವೇಂದ್ರ ನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಮೆಹಬೂಬ್ ಪಾಷಾ, ಶಿಕ್ಷಕರಾದ ಶ್ರೀನಿವಾಸ, ನರಸಪ್ಪ, ಮಂಜುಳಾ ಸಗರದ, ಸುವರ್ಣ, ನಾಗರತ್ನಾ, ವಿದ್ಯಾಶ್ರೀ ಹಾಗೂ ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net