ಬಿಜೆಪಿಯಿಂದ ಎರಡುದಿನ ಎಸ್‌ಐಆರ್ ಜಾಗೃತಿ

ಶಂಕರರೆಡ್ಡಿ
ಶಂಕರರೆಡ್ಡಿ
Published on
ರಾಯಚೂರು
ಎಸ್‌ಐಆರ್ ಪ್ರಕ್ರಿಯೆಗೆ ಸಾರ್ವಜನಿಕರ ಸಹಕಾರ ಪಡೆಯುವ ಉದ್ದೇಶದಿಂದ ಜಿಲ್ಲಾ ಬಿಜೆಪಿ ಘಟಕದಿಂದ ಜು.25 ಮತ್ತು 26 ರಂದು ಜಿಲ್ಲಾಧ್ಯಂತ ಎಸ್‌ಐಆರ್ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದೆಂದು ಜಿಲ್ಲಾ ಉಪಾಧ್ಯಕ್ಷ ಶಂಕರರೆಡ್ಡಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಆಯೋಗದ ವತಿಯಿಂದ ಬಿಎಲ್‌ಗಳು ಮನೆಮನೆಗೆ ಇನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದು, ಬಹುತೇಕ ಬೂತ್‌ಗಳಲ್ಲಿ ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ. ಬಿಜೆಪಿ ವತಿಯಿಂದ ನಿಯೋಜಿಸಲಾದ ಬಿಎಲ್‌ಎ-2 ಕಾರ್ಯಕರ್ತರು ಬಿಎಲ್‌ಒಗಳಿಗೆ ಸಹಕಾರ ನೀಡುತ್ತಿದ್ದು, ಇದೀಗ ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.

ಶನಿವಾರ ಮತ್ತು ಭಾನುವಾರ ನಡೆಯಲಿರುವ ಮಹಾಸಂಪರ್ಕ ಅಭಿಯಾನದಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮತದಾರರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಫಾರ್ಮ್ ಭರ್ತಿ ಮಾಡಲು ಸಹಾಯ ಮಾಡಲಿದ್ದಾರೆ. ಸಾರ್ವಜನಿಕರು ಬಿಎಲ್‌ಒ ಹಾಗೂ ಬಿಎಲ್-2 ಕಾರ್ಯಕರ್ತರಿಗೆ ಸಹಕರಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ಜಲ್ದಾರ,ಉಟ್ಟೂರು ರಾಘವೇಂದ್ರ, ಭೀಮಣ್ಣ ಮಂಚಾಲ, ಜೆ.ಎಂ. ಮೌನೇಶ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net