ಹಾಲು ನೀಡದಿದ್ದರೆ ಸ್ತನ ಕ್ಯಾನ್ಸರ್ ಸಾಧ್ಯತೆ

ಸಿರವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ತಾಯಿ ಹಾಲಿನ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಸಿರವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ತಾಯಿ ಹಾಲಿನ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
Published on

ಸಿರವಾರ: ನವಜಾತ ಶಿಶುವಿಗೆ ತಾಯಿಹಾಲು ಅಮೃತಕ್ಕೆ ಸಮಾನ ಎಂದು ಸ್ತ್ರೀರೋಗ ತಜ್ಞ ಡಾ.ಮೃತ್ಯುಂಜಯ ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ತಾಯಿಯ ಮೊದಲ ಹಾಲಿನಲ್ಲಿ ಕೊಲೊಸ್ಟ್ರಮ್ ಇದ್ದು, ಇದು ಶಿಶುವಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಶಿಶುವಿಗೆ ಹಾಲು ನೀಡದಿದ್ದರೆ ತಾಯಿಗೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ. ಹಾಲು ನೀಡುವುದರಿಂದ ತಾಯಿ ಮತ್ತು ಮಗುವಿನ ನಡುವೆ ಬಾಂಧವ್ಯ ಹೆಚ್ಚಲಿದೆ ಎಂದು ಹೇಳಿದರು.

ಡಾ.ಸುರೇಶ, ಡಾ.ಸುನೀಲ್ ಸರೋದೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ಫಾರ್ಮಸಿಸ್ಟ್ ವಿದ್ಯಾರಾಣಿ, ಆಶಾ ಕಾರ್ಯಕರ್ತೆಯರಾದ ರೇಣುಕಾ, ಜರೀನಾ, ಶಹನಾಜ್, ಸೌಭಾಗ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net