ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಮೆಹಬೂಬ್‌ಸಾಬ್ ಮುದ್ದಾಪುರ, ಅಮರಪ್ಪ, ಅಜಯ ನಾಡಗೌಡ ಇತರರಿದ್ದರು.
ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಮೆಹಬೂಬ್‌ಸಾಬ್ ಮುದ್ದಾಪುರ, ಅಮರಪ್ಪ, ಅಜಯ ನಾಡಗೌಡ ಇತರರಿದ್ದರು.
Published on
ಮಸ್ಕಿ: ಕ್ಷೇತ್ರದ ಗ್ರಾಮೀಣ ಪ್ರದೇಶದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದಿಂದ 5.90 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಗುತ್ತಿಗೆದಾರರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ತಿಳಿಸಿದರು. 
ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಭಾನುವಾರ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸಿಸಿ ರಸ್ತೆ ನಿರ್ಮಾಣಕ್ಕೆ ಒಂದು ಕೋಟಿ ರೂ. ಬಿಡುಗಡೆಯಾಗಿದ್ದು, ಉತ್ತಮವಾಗಿ ನಿರ್ಮಿಸಬೇಕು. ರಂಗಾಪುರ ಗ್ರಾಮದಿಂದ ಗೋನಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಕೆಕೆಆರ್‌ಡಿಬಿ ಯೋಜನೆಯಡಿ ಅನುದಾನ ಬಿಡುಗಡೆಯಾಗಿದೆ ಎಂದರು. 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿವಿಧ ಇಲಾಖೆಗಳಿಂದ ಸಾಕಷ್ಟು ಅನುದಾನ ತಂದಿರುವೆ. ಕೆಕೆಆರ್‌ಡಿಬಿ ಅನುದಾನದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದರು. 
ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ಪ್ರಮುಖರಾದ ಅಮರಪ್ಪ, ಬಸವಂತರಾಯ ವಟಗಲ್, ಅಜಯ ನಾಡಗೌಡ, ಪಿಡಿಒ ಶಾಂತಪ್ಪ, ಬಸವರಾಜ, ಯಂಕಪ್ಪ, ಲಿಂಗೇಶ, ಮಾನಯ್ಯ ಇತರರಿದ್ದರು. ರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net