ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ

ರಾಘವೇಂದ್ರ
ರಾಘವೇಂದ್ರ
Published on
ರಾಯಚೂರು
ಮಡಿವಾಳ ಯುವಕ ಸಂಘದಿಂದ ಸಮಾಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.75 ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ಜು.31 ರೊಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಸಂಘದ ಯುವ ಘಟಕದ ಸಲಹೆಗಾರ ರಾಘವೇಂದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಭಾವಚಿತ್ರದೊಂದಿಗೆ ಸಲ್ಲಿಸಬೇಕು.
ಜಿಲ್ಲೆಯ ಎಲ್ಲಾ ತಾಲೂಕಗಳ ಪ್ರತಿಭಾವಂತ ವಿದ್ಯಾರ್ಥಿಗಳು ಹೆಸರು ನೊಂದಾಯಿಸಬೇಕು. ಪ್ರತಿಭಾ ಪುರಸ್ಕಾರ ದಿನಾಂಕ ನಂತರ ಪ್ರಕಟಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ವೆಂಕಟೇಶ ಮಡಿವಾಳ, ಶಿವುಕುಮಾರ, ಮಹೇಶ, ರವಿಕುಮಾರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net