ಸಾಹಿತಿ ನುಗಡೋಣಿಗೆ ಕೇಂದ್ರ ಸಾಹಿತ್ಯ ಅಕಾಡಮೆ ಪ್ರಶಸ್ತಿ

amaresh nugadoni
amaresh nugadoni
Published on
ರಾಯಚೂರು ಜಿಲ್ಲೆಯ ಹೆಸರಾಂತ ಸಾಹಿತಿ ಪ್ರೋ.ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಜಿಲ್ಲೆಯ ಸಿರವಾರ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತರಾಗಿ ಕುಟುಂಬದ ಜತೆಗೆ ಕಾಲ ಕಳೆಯುತ್ತಿದ್ದಾರೆ.
ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ನಾನಾ ಮುಖಗಳನ್ನು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು. ಇವರು ಅನೇಕ ಕೃತಿಗಳನ್ನು ರಚಿಸಿದ್ದು,ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ‘ದಡ ಸೇರಿಸು ತಂದೆ’, ಅರಿವು, ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕತಿಯಲ್ಲಿ ಶ್ರೀಕಷ್ಣ ಆಲನಹಳ್ಳಿ ವನ್ನು ರಚಿಸಿದ್ದಾರೆ.
ಸಾಹಿತ್ಯ ಕ್ಷೇತ್ರದ ಕಾರ್ಯಸಾಧನೆಗಾಗಿ 1989 ರಲ್ಲಿ ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ಕಥಾ ಪ್ರಶಸ್ತಿ, 1991ರಲ್ಲಿ ಮಣ್ಣು ಸೇರಿತು ಬೀಜ ಕಥಾ ಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಚುಕ್ಕಿ ಉಮಾಪತಿ ಪ್ರತಿಷ್ಠಾನ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾಲಯದ ಪುಸ್ತಕ ಬಹುಮಾನ ಹಾಗು 1995 ರಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ, 2024 ರಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳು ದೊರೆತಿವೆ.

‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಸಸ್ತಿ ಲಭಿಸಿರುವು ಕುಷಿ ತಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇದೇ ರೀತಿಯಾಗಿ ರಾಜ್ಯದ ಎಲ್ಲ ಸಾಹಿತಿ ಹಾಗೂ ಕಲಾವಿದರಿಗೆ ಪ್ರೋತ್ಸಹ ನೀಡಲಿ.
ಪ್ರೋ.ಅಮರೇಶ ನುಗಡೋಣಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net