ವಿವಿಧ ಬೇಡಿಕೆಗಳು ಈಡೇರಿಕೆ ಒತ್ತಾಯಿಸಿ ಸಿಐಟಿಯು ಪ್ರತಿಭಟನೆ
118ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕಾರ್ಮಿಕ, ರೈತ ಹಾಗೂ ಕೃಷಿಕೂಲಿಕಾರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಮಂಗಳವಾರ ಸಿಐಟಿಯು ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ಮಾಡಿದರು. ಜಿಲ್ಲಾಧ್ಯಕ್ಷೆ ಹೆಚ್. ಪದ್ಮಾ, ಕಾರ್ಯದರ್ಶಿ ವರಲಕ್ಷ್ಮೀ, ಜಮುನಾ, ಗೋಕುರಮ್ಮ, ಮಹಾದೇವಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಕರಿಯಪ್ಪ ಅಚೊಳ್ಳಿ, ಕೆ.ಜಿ. ವೀರೇಶ್ ಇದ್ದರು.
Published on:
Copied
Follow Us
ರಾಯಚೂರು 118ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕಾರ್ಮಿಕ, ರೈತ ಹಾಗೂ ಕೃಷಿಕೂಲಿಕಾರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಮಂಗಳವಾರ ಸಿಐಟಿಯು ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನರ ಮಾಡಿದರು.
ಮಹಿಳೆಯರ ವೇತನ ರಹಿತ ಕೆಲಸಗಳನ್ನು ಗುರುತಿಸಿ, ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಕಡ್ಡಾಯಗೊಳಿಸುವುದರ ಜತೆಗೆ ಯೋಜನಾ ಕೆಲಸಗಾರರನ್ನು ಉದ್ಯೋಗಿಗಳೆಂದು ಪರಿಗಣಿಸಬೇಕು. ದುಡಿಯುವ ಮಹಿಳೆಯರಿಗೆ ವಿರೋಧವಾಗಿರುವ ಕಾರ್ಮಿಕ ಸಂಹಿತೆಗ ಳನ್ನು ಹಿಂಪಡೆಯಬೇಕು. ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಾತೃತ್ವ ರಜೆ, ಆರೈಕೆ ಕೊಠಡಿಗಳು, ತಿಂಗಳಲ್ಲಿ ಎರಡು ದಿನ ಮುಟ್ಟಿನ ರಜೆ, ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು ಹಾಗೂ ಶೌಚಾಲಯಗಳ ಸೌಲಭ್ಯ ಒದಗಿಸಲು ಒತ್ತಾಯಿಸಿದರು.
ಉದ್ಯೋಗ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಆಂತರಿಕ ಹಾಗೂ ಸ್ಥಳೀಯ ಸಮಿತಿಗಳನ್ನು ರಚಿಸಬೇಕು. ಮಹಿಳೆಯರು ಮತ್ತು ಮಕ್ಕಳನ್ನು ರಾತ್ರಿ ಹಾಗೂ ಅಪಾಯಕಾರಿ ಕೆಲಸಗಳಲ್ಲಿ ದುಡಿಸುವುದನ್ನು ನಿಷೇಧಿಸಬೇಕು. ದ್ವೇಷ ಅಪರಾಧಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಪಿಡಿಎಸ್ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಮನರೇಗಾ ಯೋಜನೆಯನ್ನು ಬಲಪಡಿಸಿ ನಗರ ಪ್ರದೇಶಕ್ಕೂ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿ ವರ್ಷಕ್ಕೆ 200 ದಿನಗಳ ಕೆಲಸ ಹಾಗೂ 600 ಕೂಲಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಹೆಚ್. ಪದ್ಮಾ, ಕಾರ್ಯದರ್ಶಿ ವರಲಕ್ಷ್ಮೀ, ಜಮುನಾ, ಗೋಕುರಮ್ಮ, ಮಹಾದೇವಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಕರಿಯಪ್ಪ ಅಚೊಳ್ಳಿ, ಕೆ.ಜಿ. ವೀರೇಶ್ ಸೇರಿ ಅನೇಕರು ಇದ್ದರು.