ಅಧಿಕಾರಿಗಳ ಮೇಲೆ ಕ್ರಮಕ್ಕಾಗಿ ಅಪ್ತ ಕಾರ್ಯದರ್ಶಿಗೆ ದೂರು

ಎನ್.ಆರ್.ರಮೇಶ
ಎನ್.ಆರ್.ರಮೇಶ
Published on
ರಾಯಚೂರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯ ಆಚರಣೆಯಲ್ಲಿ ಭಾಗವಹಿಸದ ಸರ್ಕಾರಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣ ಯುವ ಘಟಕದ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.
ದೂರನ್ನು ಅಂಚೆ ಮೂಲಕ ಪೋಸ್ಟ್ ಮಾಡಿದ ಅವರು. ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿದ್ದು, ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವಿತ್ತು. ಆದರೆ ಅಧಿಕಾರಿಗಳು, ಜನ ಪ್ರತಿನಿಧಿಗಳು, ಕಾರ್ಯಕ್ರಮಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.
ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಅರಣ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಹತ್ತಾರು ಇಲಾಖೆಗಳಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net