ಜನಗಣಿತಿಯಲ್ಲಿ ಸ್ವಯಂ ಗಣತಿಯ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏ.16ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. 2ನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027ರ ಫೆಬ್ರವರಿಯಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಜನಗಣತಿ-2027 ಪ್ರಕ್ರಿಯೆಯ ಪೂರ್ವ ಸಿದ್ಧತೆಗಳು ಆರಂಭಗೊಳ್ಳುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ಜನಗಣತಿ ಪ್ರಕ್ರಿಯೆಗೆ ಅವಶ್ಯವಿರುವ ಅಗತ್ಯ ನಕ್ಷೆಗಳು, ನಮೂನೆಗಳನ್ನು ತಯಾರು ಮಾಡುವುದು ಸೇರಿದಂತೆ ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಜನಗಣತಿ ಕರ್ತವ್ಯ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಸೂಕ್ತ ಮೇಲ್ವಿಚಾರಣೆ ಮಾಡಬೇಕೆಂದು ಸೂಚನೆ ನೀಡಿದರು.