ಗಂಗಾಮತಸ್ಥ ಸಮಾಜದ ಏಕೈಕ ಶಾಸಕ ಮಂಕಾಲ ವೈಧ್ಯ ಇವರಿಗೆ ಸಚಿವ ಸ್ಥಾನ ನೀಡದೇ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದ್ದು, ಮುಂದಿನ ಚುನಾವಣೆಯಲ್ಲಿ ಸಮಾಜದಿಂದ ತಕ್ಕ ಪಾಠ ಕಲಿಸಲಾಗುತ್ತದೆಂದು ಜಿಲ್ಲಾ ಗಂಗಾಮಸ್ಥ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶರಣಪ್ಪ ಕಡಗೋಲ ಎಚ್ಚರಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಮೊದಲು ಸಿಎಂ ಡಿಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮಂಕಾಲ ವೈದ್ಯ ಇವರಿಗೆ ಸಚಿವ ಸ್ಥಾನ ನೀಡಲು ಪಟ್ಟಿಯಲ್ಲಿ ಹೆಸರು ಪ್ರಕಟಿಸಲಾಗಿತ್ತು. ಏಕಾಏಕಿ ರದ್ದುಗೊಳಿಸಿ ಬೇರೆಯವರಿಗೆ ನೀಡಲಾಗಿದೆ. ರಾಜ್ಯದಲ್ಲಿ ಸರಿ ಸುಮಾರು 60 ಲಕ್ಷ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.
ಸಮಾಜಕ್ಕೆ ಸಚಿವ ಸ್ಥಾನ ನೀಡದೇ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಮೂಡಿದೆ ಕೂಡಲೇ ಅನ್ಯಾಯ ಸರಿಪಡಿಸಬೇಕು. ಇಲ್ಲವಾದರೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿದಂತೆ ಸಮಾಜ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ರಂಗಾ, ರಾಮಚಂದ್ರ ಕಡಗೋಲ, ಜಿ.ತಿಮ್ಮಪ್ಪ, ಕೆ.ನರಸಿಂಹಲು ಇದ್ದರು.