ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ಅಧಿಕಾರಿಗಳು ಕಾಲಮಿತಿಯೊಳಗೆ ಮಾಹಿತಿ ಒದಗಿಸಿ ಆಯುಕ್ತ ಬಿ.ವೆಂಕಟಸಿಂಗ್

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ  ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.ವೆಂಕಟ್ಸಿಂಗ್ ಸಂವಾದ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದರು. ಡಿಸಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಎಸಿ ಡಾ.ಹಂಪಣ್ಣ ಸಜ್ಜನ್ ,ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಹರೀಶ್ ಜಿ.,  ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಇದ್ದರು.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.ವೆಂಕಟ್ಸಿಂಗ್ ಸಂವಾದ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದರು. ಡಿಸಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಎಸಿ ಡಾ.ಹಂಪಣ್ಣ ಸಜ್ಜನ್ ,ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಹರೀಶ್ ಜಿ., ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಇದ್ದರು.
Published on

ರಾಯಚೂರು ಭ್ರಷ್ಟಾಚಾರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ. ಇದರಡಿ ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿ ಕರ್ತವ್ಯವಾಗಿದೆಂದು ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.ವೆಂಕಟ್ಸಿಂಗ್ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ನೀಡಲು ಬರುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾದ ಅರ್ಜಿಗಳಿದ್ದರೆ ಮಾಹಿತಿ ನೀಡಬೇಕು. ಯಾವುದೇ ಅಧಿಕಾರಿ ಕಾರಣವಿಲ್ಲದೆ ಮಾಹಿತಿ ನೀಡಿದರೆ ಅಥವಾ ದುರುದ್ದೇಶದಿಂದ ತಪ್ಪಾಗಿ ಮಾಹಿತಿ ಕೊಟ್ಟರೆ ದಂಡ ಪಾವತಿಸಬೇಕಾಗುತ್ತದೆ. ಜತೆಗೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ ನಡೆಸಲಾಗಿದೆ. ಜಿಲ್ಲೆಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಬಾಕಿವೆ. ನಿಗದಿ ಕಾಲದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಯು ಮಾಹಿತಿ ನೀಡಲು ವಿಫಲವಾದಲ್ಲಿ ಅಂತಹ ಅಧಿಕಾರಿ ವಿರುದ್ಧ ದಂಡ ಹಾಗೂ ಸೂಕ್ತ ಕ್ರಮ ಜರುಗಿಸಲು ಆಯೋಗಕ್ಕೆ ಅಧಿಕಾರವಿದೆ. ಸರ್ಕಾರಿ ಹುದ್ದೆ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕವರು ಸಾರ್ವಜನಿಕರಿಗೆ ಉತ್ತಮ ಕೆಲಸ ಕಾರ್ಯಗಳ ಜೊತೆಗೆ ಸಾರ್ವಜನಿಕ ಕೋರಿರುವ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡಬೇಕು. ಅಲ್ಲದೆ ದೇಶದ ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ಮಾಹಿತಿ ಹಕ್ಕು ಕುರಿತು ಆದೇಶ ನೀೀಡಿವೆ.

ನಿಗದಿತ ಸಮಯದಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಆರ್‌ಟಿಐ ಅರ್ಜಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರು ಹಾಗೂ ಮಾಹಿತಿಯನ್ನು ಪ್ರದರ್ಶನ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರದ ಸುತ್ತೋಲ್ಲೆ ಪ್ರಕಾರ ಕಡ್ಡಾಯವಾಗಿ ಹಾಕಬೇಕೆಂದರು.

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯಿಂದ ಆನೇಕ ಸ್ಕಾೃಂ ಬೆಳಕಿಗೆ ಬಂದಿವೆ. ನಾಗರಿಕರು ಕೇಳುವ ಮಾಹಿತಿಯನ್ನು ಸರಿಯಾಗಿ ನೀಡಬೇಕು. ನಿಗದಿತ ದಿನಗಳ ಒಳಗೆ ಮಾಹಿತಿ ನೀಡಬೇಕು. ಎಂಬ ನಿಯಮವಿದೆ. ಜನರನ್ನು ಕಚೇರಿಗೆ ಅಲೆದಾಡಿಸುವುದರ ಬದಲು ಆದಷ್ಟು ಬೇಗನೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಜನರು ಈ ಕಾಯ್ದೆಯಡಿ ಕೇಳುವ ಮಾಹಿತಿಯನ್ನು ಕೂಡಲೇ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಸೂಚಿಸಿದರು.

ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸಲಾಗುತ್ತದೆ. ಮಾಹಿತಿ ಸಲ್ಲಿಕೆಗೆ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯ್ದೆ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಎಸಿ ಡಾ.ಹಂಪಣ್ಣ ಸಜ್ಜನ್ ,ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಹರೀಶ್ ಜಿ., ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net