ಆ.20 ರಂದು ಜಿಲ್ಲಾಡಲಿತದಿಂದ ಡಿ.ದೇವರಾಜ ಅರಸು ಜಯಂತಿ

ಕೆ.ಶಾಂತಪ್ಪ
ಕೆ.ಶಾಂತಪ್ಪ
Published on

ರಾಯಚೂರು

ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗದ ಹಿರಿಯರಾದ ಡಿ.ದೇವರಾಜ ಅರಸು ಜಯಂತಿಯನ್ನು ಜಿಲ್ಲಾಡಳಿತದಿಂದ ಆ.20 ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆಂದು ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ನಗರದ ಮಹಿಳಾ ಸಮಾಜದಿಂದ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ವರೆಗೆ ಭಾವಚಿತ್ರ ಮೆರವಣಿಗೆ ನಡೆಯಿಲಿದೆ.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಜಿಲ್ಲಾಡಳಿತ ಅಧಿಕಾರಿ ಗಳು ಭಾಗವಹಿಸಲಿದ್ದಾರೆ. ಸಮಾಜದ ಸಾಧಕರಿಗೆ ಸನ್ಮಾನ, ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅದರಂತೆ ನಗರದ ಮಂತ್ರಾಲಯ ರಸ್ತೆಯಲ್ಲಿ ನಿರ್ಮಾಣವಾಗಿರುವ ದೇವರಾಜು ಅರಸು ಪುತ್ಥಳಿ ಸೆಪ್ಟೆಂಬರ್ ತಿಂಗಳಲ್ಲಿ ಅನಾವರಣಗೊಳಿಸಲಾಗುತ್ತದೆ. ಈಗಾಗಲೇ ರಾಜ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಆಹ್ವಾನಿಸಲಾಗಿದೆ.

 ಸಿದ್ದರಾಮಯ್ಯನವರ ಅವಧಿಯಲ್ಲಿ ಪುತ್ಥಳಿ ಅನಾವರಣ ದಿನಾಂಕ ನಿಗಧಿಯಾಗಿತ್ತು. ಕಾರಣಾಂತರ ಗಳಿಂದ ಮೂದುಡಲಾಗಿತ್ತು. ಸೆಪ್ಟೆಂಬರ್ 13 ರಿಂದ 15 ದಿನಾಂಕದೊಳಗೆ ನಿಗಧಿಪಡಿಸಲಾಗುತ್ತದೆ. ಅಲ್ಲದೇ ಪುತ್ಥಳಿ ಸ್ಥಳದ ಬಳಿ ಒಂದು ಎಕರೆ ಪ್ರದೇಶದಲ್ಲಿ ದೇವರಾಜ ಅರಸು ಭವನ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಿಂದ ಹಿಂದುಳಿದ ಇಲಾಖೆ ಜಮೀನು ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ. 10 ಕೋಟಿ ರೂ. ಅನುದಾನ ನೀಡಲು ಸರ್ಕಾರದ ಬಳಿ ಮನವಿ ಮಾಡಲಾಗಿದೆ. ಪುತ್ಥಳಿ ಅನಾವರಣ ದಿನದಂದೇ ಭೂಮಿ ಪೂಜೆ ನಡೆಸುವ ಉದ್ದೇಶವಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿ.ಲಕ್ಷ್ಮೀರೆಡ್ಡಿ, ಹನುಮಂತಪ್ಪ ಯಾದವ, ವಿಜಯಭಾಸ್ಕರ ಇಟಗಿ, ಡಾ.ಶ್ಯಾಮಣ್ಣ ಮಾಚನೂರು, ನರಸಿಂಹಲು, ಸುರೇಖಾ, ಅಂಜಲಿ ನಾರಾಯಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net