ಭೂಮಾನಂದ ಮನೆಗೆ ಡಿಸಿ ಭೇಟಿ

ಹದ್ದಿನಾಳ ಗ್ರಾಮದ ಭೂಮಾನಂದ ಮನೆಗೆ ಡಿಸಿ ಪೂವಿತಾ ಎಸ್. ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜ್‌ಕುಮಾರ, ಗಬ್ಬೂರು ಪಿಎಸ್‌ಐ ಅರುಣ್‌ಕುಮಾರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕುಟುಂಬಕ್ಕೆ
  • ಆಹಾರ
  • ಧಾನ್ಯ

ದೇವದುರ್ಗ: ಹದ್ದಿನಾಳ ಗ್ರಾಮದಲ್ಲಿ ದಲಿತ ಯುವಕ ಭೂಮಾನಂದ ಹತ್ಯೆ ಹಿನ್ನೆಲೆಯಲ್ಲಿ ಡಿಸಿ ಪೂವಿತಾ ಎಸ್. ಶುಕ್ರವಾರ ಗ್ರಾಮಕ್ಕೆ ಭೇಟಿನೀಡಿ ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಿ ಸಾಂತ್ವನ ಹೇಳಿದರು.

ನಂತರ ಮಾತನಾಡಿ, ಭೂಮಾನಂದ ಅವರ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಶಿಕ್ಷಣಕ್ಕೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಭೂಮಾನಂದ ಹೆಂಡತಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು.

ಅವರ ಹೆಂಡತಿಯ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿಗೆ ಸೂಚಿಸಿದರು. ಭೂಮಾನಂದ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ತನಿಖೆಯನ್ನು ಪಾರದರ್ಶಕ ಹಾಗೂ ನ್ಯಾಯಯುತವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net