ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಡಿಸಿ ಸೂಚನೆ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಿತೀಶ್ ಕೆ., ಅಧ್ಯಕ್ಷತೆಯಲ್ಲಿ ಡಾ.ಬಾಬು ಜಗಜೀವನ್ ರಾಮ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಎಸ್ಪಿ ಅರುಣಾಂಗ್ಶು ಗಿರಿ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಿತೀಶ್ ಕೆ., ಅಧ್ಯಕ್ಷತೆಯಲ್ಲಿ ಡಾ.ಬಾಬು ಜಗಜೀವನ್ ರಾಮ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಎಸ್ಪಿ ಅರುಣಾಂಗ್ಶು ಗಿರಿ ಇದ್ದರು.
Published on
ರಾಯಚೂರು ಜಿಲ್ಲೆಯಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಜಯಂತಿಯನ್ನು ಏಪ್ರಿಲ್ 5ರಂದು ಆಚರಣೆ ಮಾಡಲುಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೀಶ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಡಾ.ಬಾಬು ಜಗಜೀವನ್ ರಾಮ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ 9 ಗಂಟೆಗೆ ಡಾ.ಬಾಬು ಜಗಜೀವನ ರಾಮ್ ಅವರ ವೃತ್ತದಲ್ಲಿನ ಪುತ್ಥಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಪೂಜಾ ಕಾರ್ಯಕ್ರಮ ಮತ್ತು ಗಣ್ಯರಿಂದ ಪುಷ್ಪನಮನ ಕಾರ್ಯಕ್ರಮ ಇರುತ್ತದೆ. ನಂತರ ರಂಗಮಂದಿರಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಡಾ.ಬಾಬು ಜಗಜೀವನ ರಾಮ್‌ರವರ ಪುತ್ಥಳಿಗೆ ದೀಪಾಲಂಕಾರ ಮಾಡಬೇಕು. ವೃತ್ತದ ಸುತ್ತಲು ಶುಚಿತ್ವ ಕಾರ್ಯ ನಡೆಸಬೇಕು. ಪುತ್ಥಳಿಯ ಹತ್ತಿರ ಪೆಂಡಾಲ್ ಹಾಕಿಸಿ ಗಣ್ಯ ಮಹನಿಯರಿಗೆ ಆಸನ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವೇದಿಕೆಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆಯಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ವಿತರಿಸಬೇಕು. ಜಯಂತಿ ಕಾರ್ಯಕ್ರಮಕ್ಕೆ ಹಂಚಿಕೆ ಮಾಡಲಾಗಿರುವ ಕರ್ತವ್ಯಗಳನ್ನು ಯಾವುದೇ ಲೋಪ ಬಾರದ ಹಾಗೇ ಸಂಬಅಧಪಟ್ಟ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಕಾರ್ಯಕ್ರಮದಲ್ಲಿ ಹಾಜರಾತಿ ಪಡೆದುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಅರುಣಾಂಗ್ಶು ಗಿರಿ, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮಹಾನಗರ ಪಾಲಿಕೆಯ ಸಮಿತಿ ಕಾರ್ಯದರ್ಶಿ ಕೃಷ್ಣಾ ಶಾವಂತಗೇರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ,-ಸಂಸ್ಥೆಗಳ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net